ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನೀರವ್ ಮೋದಿ ಅಮೆರಿಕದಲ್ಲೇ ಇದ್ದಾನೆ ಎಂಬುದನ್ನು ದೃಢಪಡಿಸಲು ಸಾಧ್ಯವಿಲ್ಲ: ಅಮೆರಿಕ

Last Updated 2 ಮಾರ್ಚ್ 2018, 7:22 IST
ಅಕ್ಷರ ಗಾತ್ರ

ವಾಷಿಂಗ್ಟನ್: ಪಂಜಾಬ್ ನ್ಯಾಷನಲ್ ಬ್ಯಾಂಕ್‌ಗೆ 12 ಸಾವಿರ ಕೋಟಿ ರೂಪಾಯಿ ವಂಚನೆ ಮಾಡಿ, ಪರಾರಿಯಾಗಿರುವ ವಜ್ರದ ವ್ಯಾಪಾರಿ ನೀರವ್ ಮೋದಿ ಅಮೆರಿಕದಲ್ಲೇ ಇದ್ದಾನೆ ಎಂಬ ವರದಿಗಳನ್ನು ಖಚಿತಪಡಿಸಲು ಸಾಧ್ಯವಿಲ್ಲ ಎಂದು ಅಮೆರಿಕದ ವಿದೇಶಾಂಗ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ನೀರವ್ ಮೋದಿ ವಿರುದ್ಧ  ಇ.ಡಿ (ಜಾರಿ ನಿರ್ದೇಶನಾಲಯ) ಮತ್ತು ಸಿಬಿಐ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ಆತನನ್ನು ವಶಕ್ಕೆ ಪಡೆಯಲು ಇಂಟರ್ ಪೋಲ್ ನೆರವು ಕೂಡ ಕೋರಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಅಮೆರಿಕ ಇದೇ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದೆ.

ನೀರವ್ ಮೋದಿ ಅಮೆರಿಕದಲ್ಲಿ ನೆಲೆಸಿದ್ದಾನೆ ಎಂದು ಮಾಧ್ಯಮಗಳು ವರದಿ ಮಾಡಿದ್ದವು.  ಮಾಧ್ಯಮಗಳ ವರದಿಗಳು ಇಲಾಖೆಯ ಗಮನಕ್ಕೆ ಬಂದಿವೆ. ಆದರೆ ನೀರವ್ ಮೋದಿ ಅಮೆರಿಕದಲ್ಲೇ ಇದ್ದಾನೆ ಎಂಬುದನ್ನು ದೃಢೀಕರಿಸಲು ಸಾಧ್ಯವಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ನೀರವ್ ಮೋದಿ ಪ್ರಕರಣಕ್ಕೆ ಸಂಬಂಧಿಸಿದಂತೆ ಭಾರತದ ತನಿಖೆಗೆ ಎಲ್ಲ ರೀತಿಯ ನೆರವು ನೀಡಲಾಗುವುದು ಎಂದು ವಿದೇಶಾಂಗ ಇಲಾಖೆ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT