ಪಾಕ್‌ ಇನ್ನಷ್ಟು ಕ್ರಮ ಕೈಗೊಳ್ಳಲಿ: ಅಮೆರಿಕ

ಸೋಮವಾರ, ಮಾರ್ಚ್ 25, 2019
31 °C

ಪಾಕ್‌ ಇನ್ನಷ್ಟು ಕ್ರಮ ಕೈಗೊಳ್ಳಲಿ: ಅಮೆರಿಕ

Published:
Updated:
ಪಾಕ್‌ ಇನ್ನಷ್ಟು ಕ್ರಮ ಕೈಗೊಳ್ಳಲಿ: ಅಮೆರಿಕ

ವಾಷಿಂಗ್ಟನ್‌: ಭಯೋತ್ಪಾದನಾ ಚಟುವಟಿಕೆಗಳನ್ನು ನಿಗ್ರಹಿಸಲು ಪಾಕಿಸ್ತಾನ ಇನ್ನಷ್ಟು ಕ್ರಮಗಳನ್ನು ಕೈಗೊಳ್ಳಬೇಕಿದೆ ಎಂದು ಅಮೆರಿಕದ ರಕ್ಷಣಾ ಸಚಿವಾಲಯ ತಿಳಿಸಿದೆ.

‘ಭಯೋತ್ಪಾದನೆ ವಿರುದ್ಧ ಹೋರಾಡಲು ಪಾಕಿಸ್ತಾನಕ್ಕೆ ಇದೊಂದು ಉತ್ತಮ ಅವಕಾಶ. ಪಾಕಿಸ್ತಾನ ಕಠಿಣ ಕ್ರಮಗಳನ್ನು ಕೈಗೊಳ್ಳುವ ವಿಶ್ವಾಸವಿದೆ. ಭಯೋತ್ಪಾದನೆ ವಿರುದ್ಧದ ಹೋರಾಟದಲ್ಲಿ ಪಾಕಿಸ್ತಾನದ ಜತೆ ಕಾರ್ಯ ನಿರ್ವಹಿಸಲು ಅಮೆರಿಕ ಸಿದ್ಧವಿದೆ’ ಎಂದು ಸಚಿವಾಲಯದ ವಕ್ತಾರ ಡ್ಯಾನಾ ವೈಟ್‌ ತಿಳಿಸಿದ್ದಾರೆ.

ಹಖಾನಿ ಉಗ್ರ ಸಂಘಟನೆ ಮತ್ತು ತಾಲಿಬಾನಿ ಸಂಘಟನೆಗಳ ವಿರುದ್ಧ ಪಾಕಿಸ್ತಾನ ಯಾವುದೇ ಕ್ರಮಗಳನ್ನು ಕೈಗೊಂಡಿಲ್ಲ ಎಂದು ಅಮೆರಿಕ ಆಗಾಗ ಆರೋಪಿಸುತ್ತಲೇ ಇದೆ. ಜತೆಗೆ ಕಳೆದ ತಿಂಗಳಷ್ಟೇ ಪಾಕಿಸ್ತಾನಕ್ಕೆ ನೀಡುತ್ತಿದ್ದ ಸೇನಾ ನೆರವನ್ನು ಸ್ಥಗಿತಗೊಳಿಸಿತ್ತು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry