ಆನೆಕಾಡು ಅರಣ್ಯದಲ್ಲಿ ಕಾಳ್ಗಿಚ್ಚು

7

ಆನೆಕಾಡು ಅರಣ್ಯದಲ್ಲಿ ಕಾಳ್ಗಿಚ್ಚು

Published:
Updated:
ಆನೆಕಾಡು ಅರಣ್ಯದಲ್ಲಿ ಕಾಳ್ಗಿಚ್ಚು

ಕುಶಾಲನಗರ: ಸಮೀಪದ ಗುಡ್ಡೆಹೊಸೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಆನೆಕಾಡು ಮೀಸಲು ಅರಣ್ಯ ಪ್ರದೇಶದಲ್ಲಿ ಶುಕ್ರವಾರ ಕಾಳ್ಗಿಚ್ಚು ಕಾಣಿಸಿದೆ.

ಅರಣ್ಯಕ್ಕೆ ಬೆಂಕಿ ಬಿದ್ದಿರುವುದು ಗಮನಕ್ಕೆ ಬರುತ್ತಿದಂತೆ ಕಾರ್ಯಾಚರಣೆ ಆರಂಭಿಸಿದ ಅರಣ್ಯ ಇಲಾಖೆ ಸಿಬ್ಬಂದಿ, ಸಂಜೆ ಹೊತ್ತಿಗೆ ಬೆಂಕಿ ನಿಯಂತ್ರಿಸುವಲ್ಲಿ ಸಫಲರಾದರು. ಮಡಿಕೇರಿ, ಕುಶಾಲನಗರ ಹಾಗೂ ಸೋಮವಾರಪೇಟೆಯಿಂದ ಬಂದಿದ್ದ ಅಗ್ನಿಶಾಮಕ ದಳ ಸಿಬ್ಬಂದಿ ಕೂಡಾ ಬೆಂಕಿ ನಂದಿಸಲು ನೆರವಾದರು.

ಕಳೆದ ವರ್ಷವೂ ಆನೆಕಾಡು ಅರಣ್ಯದಲ್ಲಿ ಕಾಳ್ಗಿಚ್ಚು ಕಾಣಿಸಿಕೊಂಡಿತ್ತು. ಪ್ರವಾಸಿ ತಾಣ ದುಬಾರೆಯಲ್ಲಿ ಕಾಣಿಸಿಕೊಂಡಿದ್ದ ಕಾಳ್ಗಿಚ್ಚು ನಿಯಂತ್ರಣಕ್ಕೆ ಬರುತ್ತಿದೆ ಎಂದು ವಲಯ ಅರಣ್ಯಾಧಿಕಾರಿ ಅರುಣ್ ತಿಳಿಸಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry