4ರಿಂದ ಜನಸಂಕಲ್ಪ ಜಾಥಾ

7

4ರಿಂದ ಜನಸಂಕಲ್ಪ ಜಾಥಾ

Published:
Updated:

ಬೆಂಗಳೂರು: ಚುನಾವಣೆ ಸಂದರ್ಭದಲ್ಲಿ ರಾಜಕಾರಣಿಗಳ ಪೊಳ್ಳು ಭರವಸೆಗೆ ಬಲಿಯಾಗದಂತೆ ಜಾಗೃತಿ ಮೂಡಿಸಲು ಇದೇ 4ರಿಂದ ಜನ

ಸಂಕಲ್ಪ ಜಾಥಾ ನಡೆಯಲಿದೆ ಎಂದು ಭಾರತೀಯ ರಿಪಬ್ಲಿಕನ್‌ ಪಕ್ಷದ ಉಪಾಧ್ಯಕ್ಷ ಶ್ರೀನಿವಾಸ್‌ ತಿಳಿಸಿದರು.

‘4ರಂದು ಕೋಲಾರದ ಹಳೇ ಬಸ್‌ ನಿಲ್ದಾಣದಲ್ಲಿ ಜಿಲ್ಲಾ ಕಾರ್ಯಕರ್ತರ ಸಮಾವೇಶದಲ್ಲಿ ಭೀಮರಥಕ್ಕೆ ಆರ್‌ಪಿಐ ರಾಷ್ಟ್ರೀಯ ಘಟಕದ ಅಧ್ಯಕ್ಷ ರಾಮದಾಸ ಅಠವಳೆ ಚಾಲನೆ ನೀಡಲಿದ್ದಾರೆ. 5ರಿಂದ ಬೆಂಗಳೂರಿನ 28 ಕ್ಷೇತ್ರಗಳಲ್ಲಿ ಜಾಥಾ ಸಂಚರಿಸಲಿದೆ. ಪ್ರತಿದಿನ ಆಯಾ ಕ್ಷೇತ್ರದಲ್ಲಿ ಬಹಿರಂಗ ಸಭೆ ನಡೆಸಲಾಗುವುದು’ ಎಂದರು.

‘ಏಪ್ರಿಲ್‌ ಮೊದಲ ವಾರದಲ್ಲಿ ರಾಜ್ಯಮಟ್ಟದ ಸಮಾವೇಶ ನಡೆಸುತ್ತೇವೆ. ಅದೇ ದಿನ ಪಕ್ಷದ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಗೊಳಿಸಿ, ಚುನಾವಣಾ ಪ್ರಚಾರಕ್ಕೆ ಚಾಲನೆ ನೀಡುತ್ತೇವೆ’ ಎಂದು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry