ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತ್ರಿಪುರದಲ್ಲಿ ಸಿಪಿಎಂ, ನಾಗಾಲ್ಯಾಂಡ್‌ನಲ್ಲಿ ಬಿಜೆಪಿ, ಮೇಘಾಲಯದಲ್ಲಿ ಕಾಂಗ್ರೆಸ್ ಆರಂಭಿಕ ಮುನ್ನಡೆ

Last Updated 3 ಮಾರ್ಚ್ 2018, 3:22 IST
ಅಕ್ಷರ ಗಾತ್ರ

ನವದೆಹಲಿ: ಈಶಾನ್ಯ ಬಾರತದ ಪುಟ್ಟ ರಾಜ್ಯಗಳಾದ ಮೇಘಾಲಯ, ತ್ರಿಪುರ ಮತ್ತು ನಾಗಾಲ್ಯಾಂಡ್ ರಾಜ್ಯಗಳ ವಿಧಾನಸಭಾ ಚುನಾವಣೆಯ ಮತ ಎಣಿಕೆ ಆರಂಭವಾಗಿದೆ.

ತ್ರಿಪುರದಲ್ಲಿ  ಸಿಪಿಎಂ, ನಾಗಾಲ್ಯಾಂಡ್ ರಾಜ್ಯದಲ್ಲಿ ಬಿಜೆಪಿ ಮತ್ತು ಮೇಘಾಲಯದಲ್ಲಿ ಕಾಂಗ್ರೆಸ್ ಆರಂಭಿಕ ಮುನ್ನಡೆ ಕಾಯ್ದುಕೊಂಡಿವೆ.

ಮೇಘಾಲಯ ಮತ್ತು ನಾಗಾಲ್ಯಾಂಡ್‌  ರಾಜ್ಯಗಳಲ್ಲೂ ತಲಾ 60 ವಿಧಾನಸಭಾ ಕ್ಷೇತ್ರಗಳಿವೆ. ಆದರೆ ತಲಾ 59 ಕ್ಷೇತ್ರಗಳಿಗೆ ಮಾತ್ರ ಮತದಾನ ನಡೆದಿದೆ.

ಮೇಘಾಲಯದಲ್ಲಿ ಎಲ್ಲಾ 59 ಕ್ಷೇತ್ರಗಳಲ್ಲೂ ಕಾಂಗ್ರೆಸ್ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ. ಬಿಜೆಪಿ 47 ಕ್ಷೇತ್ರಗಳಲ್ಲಿ ಸ್ಪರ್ಧಿಸಿದೆ. ನಾಗಾಲ್ಯಾಂಡ್‌ನಲ್ಲಿ 40 ಕ್ಷೇತ್ರಗಳಲ್ಲಿ ಎನ್‌ಡಿಪಿಪಿ ಮತ್ತು 20 ಕ್ಷೇತ್ರಗಳಲ್ಲಿ ಬಿಜೆಪಿ ಸ್ಪರ್ಧೆ ಮಾಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT