ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತ್ರಿಪುರ: ಬಿಜೆಪಿ, ಸಿಪಿಎಂ ನಡುವೆ ತೀವ್ರ ಪೈಪೋಟಿ

Last Updated 3 ಮಾರ್ಚ್ 2018, 4:30 IST
ಅಕ್ಷರ ಗಾತ್ರ

ಅಗರ್ತಲಾ: ತ್ರಿಪುರ ರಾಜ್ಯದಲ್ಲಿ ಕಳೆದ 25 ವರ್ಷಗಳಿಂದ ಆಳ್ವಿಕೆ ನಡೆಸುತ್ತಿರುವ ಮಾರ್ಕ್ಸ್ ವಾದಿ ಕಮ್ಯುನಿಸ್ಟ್ ಪಕ್ಷ ಹಾಗೂ ಭಾರತೀಯ ಜನತಾ ಪಕ್ಷದ ನಡುವ ತೀವ್ರ ಹಣಾಹಣಿ ಏರ್ಪಟ್ಟಿದೆ.

ಬಿಜೆಪಿ 51 ಸ್ಥಾನಗಳಲ್ಲಿ ಹಾಗೂ ಮೈತ್ರಿ ಮಾಡಿಕೊಂಡಿರುವ ಐಪಿಎಫ್‌ಟಿ 9 ಸ್ಥಾನಗಳಲ್ಲಿ ಸ್ಪರ್ಧೆ ಮಾಡಿದೆ.  ಸಿಪಿಎಂ 57 ಸ್ಥಾನಗಳಲ್ಲಿ ಹಾಗೂ ಅದರ ಮೈತ್ರಿ ಪಕ್ಷಗಳಿಗೆ 2  ಸ್ಥಾನಗಳನ್ನು ಬಿಟ್ಟುಕೊಟ್ಟಿದೆ.  ಕಾಂಗ್ರೆಸ್ ಏಕಾಂಗಿಯಾಗಿ ಚುನಾವಣೆಯಲ್ಲಿ ಸ್ಪರ್ಧೆ ಮಾಡಿದೆ.

ಇತ್ತೀಚಿನ ವರದಿಗಳ ಪ್ರಕಾರ ಸಿಪಿಎಂ ಮತ್ತು ಬಿಜೆಪಿ ಸಮಬಲದಲ್ಲಿ ಮುನ್ನಡೆ ಕಾಯ್ದುಕೊಂಡಿದ್ದು ಇತರರು 1 ಸ್ಥಾನದಲ್ಲಿ ಮುನ್ನಡೆ ಸಾಧಿಸಿದ್ದಾರೆ. ಕಾಂಗ್ರೆಸ್ ಪಕ್ಷ  ಖಾತೆ ತೆರೆಯುವಲ್ಲಿ ವಿಫಲವಾಗಿದೆ. ಬಿಜೆಪಿ ಮತ್ತು ಸಿಪಿಎಂ ತಲಾ 28 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT