ವಿಧಾನಸಭೆ ಚುನಾವಣಾ ಫಲಿತಾಂಶ: ಮೇಘಾಲಯದಲ್ಲಿ ಕಾಂಗ್ರೆಸ್‌ಗೆ ಮುನ್ನಡೆ

7

ವಿಧಾನಸಭೆ ಚುನಾವಣಾ ಫಲಿತಾಂಶ: ಮೇಘಾಲಯದಲ್ಲಿ ಕಾಂಗ್ರೆಸ್‌ಗೆ ಮುನ್ನಡೆ

Published:
Updated:
ವಿಧಾನಸಭೆ ಚುನಾವಣಾ ಫಲಿತಾಂಶ: ಮೇಘಾಲಯದಲ್ಲಿ ಕಾಂಗ್ರೆಸ್‌ಗೆ ಮುನ್ನಡೆ

ನವದೆಹಲಿ: ಮೇಘಾಲಯ ವಿಧಾನಸಭೆಗೆ ನಡೆದ ಚುನಾವಣೆಯ ಮತ ಎಣಿಕೆ ಪ್ರಗತಿಯಲ್ಲಿದ್ದು, ಸದ್ಯ ಕಾಂಗ್ರೆಸ್‌ ಮುನ್ನಡೆ ಕಾಯ್ದುಕೊಂಡಿದೆ.

ಕಾಂಗ್ರೆಸ್ 24 ಕ್ಷೇತ್ರಗಳಲ್ಲಿ ಮುನ್ನಡೆಯಲ್ಲಿದ್ದು, ಎನ್‌ಪಿಪಿ 14 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. ಪಕ್ಷೇತರ ಅಭ್ಯರ್ಥಿಗಳು 9 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದ್ದಾರೆ. 2 ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನಡೆಯಲ್ಲಿದೆ.

60 ಸದಸ್ಯ ಬಲದ ಮೇಘಾಲಯ ವಿಧಾನಸಭೆಯ 59 ಸ್ಥಾನಗಳಿಗೆ ಫೆಬ್ರುವರಿ 27ರಂದು ಚುನಾವಣೆ ನಡೆದಿದೆ. ಬಿಜೆಪಿ 47 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ್ದರೆ ಕಾಂಗ್ರೆಸ್ ಎಲ್ಲ 59 ಕ್ಷೇತ್ರಗಳಲ್ಲಿ ಸ್ಪರ್ಧಿಸಿದೆ. ಮುಖ್ಯಮಂತ್ರಿ ಸಂಗ್ಮಾ ಎರಡು ಕ್ಷೇತ್ರಗಳಿಂದ ಸ್ಪರ್ಧಿಸಿದ್ದಾರೆ.

ಆರಂಭಿಕ ಹಂತದಲ್ಲಿ ಕಾಂಗ್ರೆಸ್ 12 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿತ್ತು. ಎನ್‌ಪಿಪಿ 8 ಕ್ಷೇತ್ರಗಳಲ್ಲಿ ಮುನ್ನಡೆಯಲ್ಲಿತ್ತು. ಬಿಜೆಪಿ ಎರಡು ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿತ್ತು. ಯುಡಿಪಿ ಮತ್ತು ಪಿಡಿಪಿಗಳು ತಲಾ ನಾಲ್ಕು ಕ್ಷೇತ್ರಗಳಲ್ಲಿ ಮುನ್ನಡೆಯಲ್ಲಿದ್ದವು.

ಸಂಗ್ಮಾ ಮುನ್ನಡೆ: ಸಾಂಗ್‌ಸಾಕ್ ಕ್ಷೇತ್ರದಿಂದ ಸ್ಪರ್ಧಿಸಿರುವ ಮೇಘಾಲಯದ ಮುಖ್ಯಮಂತ್ರಿ ಮುಕುಲ್ ಸಂಗ್ಮಾ ಮುನ್ನಡೆ ಕಾಯ್ದುಕೊಂಡಿದ್ದಾರೆ. ಎನ್‌ಪಿಪಿಯ ನಿಹಿಮ್ ಶಿರಾ ಎರಡನೇ ಸ್ಥಾನದಲ್ಲಿ ಪೈಪೋಟಿ ನಿಡುತ್ತಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry