ತ್ರಿಪುರಾದಲ್ಲಿ ಬಿಜೆಪಿ ಮಿತ್ರಪಕ್ಷಗಳಿಗೆ ಭಾರಿ ಮುನ್ನಡೆ

ಭಾನುವಾರ, ಮಾರ್ಚ್ 24, 2019
27 °C

ತ್ರಿಪುರಾದಲ್ಲಿ ಬಿಜೆಪಿ ಮಿತ್ರಪಕ್ಷಗಳಿಗೆ ಭಾರಿ ಮುನ್ನಡೆ

Published:
Updated:
ತ್ರಿಪುರಾದಲ್ಲಿ ಬಿಜೆಪಿ ಮಿತ್ರಪಕ್ಷಗಳಿಗೆ ಭಾರಿ ಮುನ್ನಡೆ

ಅಗರ್ತಲ: ತ್ರಿಪುರಾ ವಿಧಾನಸಭಾ ಚುನಾವಣೆಯ ಮತ ಎಣಿಕೆ ಪ್ರಗತಿಯಲ್ಲಿದ್ದು, ಬಿಜೆಪಿ ಮಿತ್ರಪಕ್ಷಗಳು ಭಾರಿ ಮುನ್ನಡೆ ಕಾಯ್ದುಕೊಂಡಿವೆ. ಆಡಳಿತಾರೂಢ ಸಿಪಿಐಎಂಗೆ ಸೋಲಿನ ಭೀತಿ ಎದುರಾಗಿದೆ.

ಸದ್ಯದ ಮಾಹಿತಿ ಪ್ರಕಾರ, ಬಿಜೆಪಿ ಮಿತ್ರಪಕ್ಷಗಳು 38 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿವೆ. ಸಿಪಿಐಎಂ ಮಿತ್ರಪಕ್ಷಗಳು 21 ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಂಡಿವೆ.

ಬಿಜೆಪಿ 51 ಕ್ಷೇತ್ರಗಳಲ್ಲಿ ಹಾಗೂ ಉಳಿದ ಕ್ಷೇತ್ರಗಳಲ್ಲಿ ಮಿತ್ರಪಕ್ಷ ಐಪಿಎಫ್‌ಟಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ್ದವು. ಸಿಪಿಎಂ 57 ಸ್ಥಾನಗಳಿಗೆ ಸ್ಪರ್ಧಿಸಿದ್ದು, ಮಿತ್ರಪಕ್ಷಗಳಿಗೆ 2  ಸ್ಥಾನಗಳನ್ನು ಬಿಟ್ಟುಕೊಟ್ಟಿದೆ.  ಕಾಂಗ್ರೆಸ್ ಏಕಾಂಗಿಯಾಗಿ ಚುನಾವಣೆಯಲ್ಲಿ ಸ್ಪರ್ಧಿಸಿದ್ದು, ಇನ್ನೂ ಖಾತೆ ತೆರದಿಲ್ಲ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry