ಶಿಕ್ಷಣ ತಜ್ಞ ಡಿ.ಬೋರಪ್ಪ ನಿಧನ

7

ಶಿಕ್ಷಣ ತಜ್ಞ ಡಿ.ಬೋರಪ್ಪ ನಿಧನ

Published:
Updated:
ಶಿಕ್ಷಣ ತಜ್ಞ ಡಿ.ಬೋರಪ್ಪ ನಿಧನ

ಚಿತ್ರದುರ್ಗ: ಜಿಲ್ಲಾ ಮದಕರಿ ನಾಯಕ ವಿದ್ಯಾಸಂಸ್ಥೆಯ ಸಂಸ್ಥಾಪಕ, ಶಿಕ್ಷಣ ತಜ್ಞ ಡಿ.ಬೋರಪ್ಪ (83) ಅವರು ಶನಿವಾರ ಬೆಳಗಿನ ಜಾವ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.

ಅವರು ಕೆಲಸಮಯದಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಅವರಿಗೆ ಪತ್ನಿ, ಇಬ್ಬರು ಪುತ್ರಿಯರು ಇದ್ದಾರೆ. ಮೃತರ ಅಂತ್ಯಕ್ರಿಯೆ ಭಾನುವಾರ ಮಧ್ಯಾಹ್ನ 1 ಗಂಟೆಗೆ ಕೋಟೆ ಮುಂಭಾಗದ ಮಹಾರಾಣಿ ಕಾಲೇಜು ಆವರಣದಲ್ಲಿ ನಡೆಯಲಿದೆ ಎಂದು ಅಳಿಯ ಸಂದೀಪ್ ತಿಳಿಸಿದ್ದಾರೆ.

ಶಿಕ್ಷಕರಾಗಿ ವೃತ್ತಿಜೀವನ ಆರಂಭಿಸಿದ್ದ ಅವರು, ಶಿಕ್ಷಣ ಸಂಸ್ಥೆಗಳನ್ನು ಕಟ್ಟಿ ಸಾವಿರಾರು ಮಕ್ಕಳಿಗೆ ವಿದ್ಯಾದಾನ ಮಾಡಿದ್ದಾರೆ. ರಾಜ್ಯದ ವಿವಿಧೆಡೆ ಶಿಕ್ಷಣ ಸಂಸ್ಥೆಗಳನ್ನು ಸ್ಥಾಪಿಸಿದ್ದಾರೆ. ನರ್ಸರಿಯಿಂದ ಸ್ನಾತಕೋತ್ತರ ಕಾಲೇಜು, ಡಿ.ಇಡಿ, ಬಿ.ಇಡಿ, ನರ್ಸಿಂಗ್, ಬಿ.ಪಿ.ಇಡಿ, ಆಯುರ್ವೇದ ಕಾಲೇಜುಗಳನ್ನು ಸ್ಥಾಪಿಸಿದ್ದಾರೆ.

ಬೋರಪ್ಪ ಅವರ ಶಿಕ್ಷಣ ಮತ್ತು ಸಾಮಾಜಿಕ ಸೇವೆಯನ್ನು ಗುರುತಿಸಿ ರಾಜ್ಯ ಸರ್ಕಾರ 2014ರಲ್ಲಿ ಮಹರ್ಷಿ ವಾಲ್ಮೀಕಿ ಪ್ರಶಸ್ತಿ ನೀಡಿ ಗೌರವಿಸಿತ್ತು. ಅವರಿಗೆ ಜಿಲ್ಲಾ ಮತ್ತು ರಾಜ್ಯಮಟ್ಟದ ಪ್ರಶಸ್ತಿಗಳೂ ಲಭಿಸಿವೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry