ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚೀನಾ: ಕ್ಸಿ ಅವಧಿ ಮುಂದುವರಿಸಲು ಸಂವಿಧಾನಕ್ಕೆ ತಿದ್ದುಪಡಿ

Last Updated 3 ಮಾರ್ಚ್ 2018, 19:30 IST
ಅಕ್ಷರ ಗಾತ್ರ

ಬೀಜಿಂಗ್‌: ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್‌ ಅವರ ಅಧಿಕಾರಾವಧಿಯನ್ನು ಮುಂದುವರಿಸುವ ನಿಟ್ಟಿನಲ್ಲಿ ಸಂವಿಧಾನಕ್ಕೆ ತಿದ್ದುಪಡಿ ತರಲಾಗುತ್ತಿದೆ.

ಈ ಮಹತ್ವದ ತಿದ್ದುಪಡಿಗಾಗಿಯೇ ವಾರ್ಷಿಕ ಸಂಸತ್‌ ಅಧಿವೇಶನ ಆರಂಭವಾಗಿದೆ. ಪ್ರಸ್ತುತ ನಿಯಮಗಳ ಅನ್ವಯ ಎರಡು ಅವಧಿಗೆ ಮಾತ್ರ ಅಧ್ಯಕ್ಷರ ಹುದ್ದೆಯನ್ನು ಸೀಮಿತಗೊಳಿಸಲಾಗಿದೆ. ಈ ಮಿತಿಯನ್ನು ತೆಗೆದು ಹಾಕಲು ಈ ಕ್ರಮಕೈಗೊಳ್ಳಲಾಗುತ್ತಿದೆ.

ವಾರ್ಷಿಕ ಸಂಸತ್‌ ಅಧಿವೇಶನದಲ್ಲಿ ಚೀನಾದ ಪೀಪಲ್ಸ್‌ ಪಾಲಿಟಿಕಲ್‌ ಕನ್ಸಲ್ಟೇಟಿವ್‌ ಕಾನ್ಫರೆನ್ಸ್‌ನ (ಸಿಪಿಪಿಸಿಸಿ) ಮತ್ತು ನ್ಯಾಷನಲ್‌ ಪೀಪಲ್ಸ್‌ ಕಾಂಗ್ರೆಸ್‌ನ ಐದು ಸಾವಿರ ಪ್ರತಿನಿಧಿಗಳು ಪಾಲ್ಗೊಂಡಿದ್ದಾರೆ. ತಿದ್ದುಪಡಿಗೆ ಅನುಮೋದನೆ ದೊರೆತರೆ ಕ್ಸಿ ಸತತ ಮೂರನೇ ಅವಧಿಗೆ ಮುಂದುವರಿಯಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT