ಎಲ್ಲೂ ಅಭ್ಯರ್ಥಿ ಘೋಷಣೆ ಮಾಡಿಲ್ಲ: ಈಶ್ವರಪ್ಪ

ಮಂಗಳವಾರ, ಮಾರ್ಚ್ 26, 2019
33 °C

ಎಲ್ಲೂ ಅಭ್ಯರ್ಥಿ ಘೋಷಣೆ ಮಾಡಿಲ್ಲ: ಈಶ್ವರಪ್ಪ

Published:
Updated:
ಎಲ್ಲೂ ಅಭ್ಯರ್ಥಿ ಘೋಷಣೆ ಮಾಡಿಲ್ಲ: ಈಶ್ವರಪ್ಪ

ಶಿವಮೊಗ್ಗ: ‘ರಾಜ್ಯದ ಯಾವ ವಿಧಾನಸಭಾ ಕ್ಷೇತ್ರದಲ್ಲೂ ಬಿಜೆಪಿ ಅಭ್ಯರ್ಥಿ ಘೋಷಣೆ ಆಗಿಲ್ಲ. ಶಿವಮೊಗ್ಗ ನಗರ ಕ್ಷೇತ್ರಕ್ಕೆ ತಮ್ಮ ಹೆಸರೂ ಅಂತಿಮವಾಗಿಲ್ಲ’ ಎಂದು ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಕೆ.ಎಸ್. ಈಶ್ವರಪ್ಪ ಪ್ರತಿಕ್ರಿಯಿಸಿದರು.

ಅಭ್ಯರ್ಥಿಗಳ ಆಯ್ಕೆ ಕುರಿತು ಈಗಾಗಲೇ ಸರ್ವೆ ಕಾರ್ಯ ನಡೆಸಲಾಗಿದೆ. ಪಕ್ಷದ ಹೈಕಮಾಂಡ್ ಸದ್ಯದಲ್ಲೇ ಪಟ್ಟಿ ಬಿಡುಗಡೆ ಮಾಡಲಿದೆ ಎಂದು ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಉತ್ತರ ನೀಡಿದರು.

ಈಗಾಗಲೇ ಸಾಗರಕ್ಕೆ ಹರತಾಳು ಹಾಲಪ್ಪ, ಸೊರಬಕ್ಕೆ ಕುಮಾರ್ ಬಂಗಾರಪ್ಪ ಅವರೇ ಅಭ್ಯರ್ಥಿಗಳು ಎಂದು ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಅವರು ಹೇಳಿದ್ದಾರಲ್ಲ ಎಂಬ ಪ್ರಶ್ನೆಗೆ, ‘224 ವಿಧಾನಸಭಾ ಕ್ಷೇತ್ರಗಳಲ್ಲಿ ಒಂದೂ ಕ್ಷೇತ್ರವೂ ಅಂತಿಮವಾಗಿಲ್ಲ. ಹಾಗೆ ಹೇಳಿದವರನ್ನೇ ಕೇಳಿದರೆ ಸರಿಯಾದ ಉತ್ತರ ಸಿಗಬಹುದು’ ಎಂದು ತೀಕ್ಷ್ಣ ಪ್ರತಿಕ್ರಿಯೆ ನೀಡಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry