ಸತ್ಯನಾರಾಯಣರಾವ್ ವಿರುದ್ಧ ಎಸಿಬಿ ಎಫ್‌ಐಆರ್

7

ಸತ್ಯನಾರಾಯಣರಾವ್ ವಿರುದ್ಧ ಎಸಿಬಿ ಎಫ್‌ಐಆರ್

Published:
Updated:

ಬೆಂಗಳೂರು: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಬಂದಿಯಾಗಿರುವ ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿ ವಿ.ಕೆ.ಶಶಿಕಲಾಗೆ ವಿಶೇಷ ಆತಿಥ್ಯ ನೀಡಲು ₹ 2 ಕೋಟಿ ಲಂಚ ಪಡೆದಿದ್ದಾರೆ ಎನ್ನಲಾದ ಆರೋಪಕ್ಕೆ ಎದುರಿಸುತ್ತಿರುವ ಕಾರಾಗೃಹಗಳ ಇಲಾಖೆಯ ನಿವೃತ್ತ ಡಿಜಿಪಿ ಎಚ್‌.ಎನ್‌. ಸತ್ಯನಾರಾಯಣರಾವ್ ವಿರುದ್ಧ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಶನಿವಾರ ಎಫ್‌ಐಆರ್ ದಾಖಲಿಸಿದೆ.

ಸರ್ಕಾರ ನೀಡಿರುವ ಆದೇಶದ ಮೇರೆಗೆ ಭ್ರಷ್ಟಾಚಾರ ನಿಗ್ರಹ ಕಾಯ್ದೆಯಡಿ ಎಸಿಬಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry