ಕರ್ನಾಟಕ ವಿದ್ಯಾವರ್ಧಕ ಸಂಘಕ್ಕೆ ಮತ್ತೆ ಪಾಟೀಲ ಪುಟ್ಟಪ್ಪ ಅಧ್ಯಕ್ಷ

7

ಕರ್ನಾಟಕ ವಿದ್ಯಾವರ್ಧಕ ಸಂಘಕ್ಕೆ ಮತ್ತೆ ಪಾಟೀಲ ಪುಟ್ಟಪ್ಪ ಅಧ್ಯಕ್ಷ

Published:
Updated:
ಕರ್ನಾಟಕ ವಿದ್ಯಾವರ್ಧಕ ಸಂಘಕ್ಕೆ ಮತ್ತೆ ಪಾಟೀಲ ಪುಟ್ಟಪ್ಪ ಅಧ್ಯಕ್ಷ

ಧಾರವಾಡ: ಕರ್ನಾಟಕ ವಿದ್ಯಾವರ್ಧಕ ಸಂಘದ ತ್ರೈವಾರ್ಷಿಕ ಚುನಾವಣೆ ಭಾನುವಾರ ನಡೆದಿದ್ದು, ಫಲಿತಾಂಶವೂ ಪ್ರಕಟಗೊಂಡಿದೆ. ಡಾ. ಪಾಟೀಲ ಪುಟ್ಟಪ್ಪ ಬಣ ವಿಜಯ ಸಾಧಿಸಿದೆ.

ಇದರಿಂದ, ಕಳೆದ 50 ವರ್ಷಗಳಿಂದ ಸಂಘದ ಅಧ್ಯಕ್ಷರಾಗಿರುವ ಪಾಟೀಲ ಪುಟ್ಟಪ್ಪ ಅವರೇ ಮುಂದೆಯೂ ಆ ಹುದ್ದೆಯಲ್ಲಿ ಮುಂದುವರಿಯಲಿದ್ದಾರೆ. ಉಪಾಧ್ಯಕ್ಷರಾಗಿ ನಿಂಗಣ್ಣ ಕುಂಟಿ ಆಯ್ಕೆಯಾಗಿದ್ದಾರೆ. ಕಾರ್ಯದರ್ಶಿಯಾಗಿ ಶಿವಣ್ಣ ಬೆಲ್ಲದ, ಕೋಶಾಧಿಕಾರಿಯಾಗಿ ಕೃಷ್ಣ ಕೋಷಿ ಆಯ್ಕೆಯಾಗಿದ್ದಾರೆ.

ನಾಡಿನ ಪ್ರತಿಷ್ಠಿತ ಸಂಸ್ಥೆಗಳಲ್ಲಿ ಒಂದಾಗಿರುವ ಕರ್ನಾಟಕ ವಿದ್ಯಾವರ್ಧಕ ಸಂಘ ಶತಮಾನೋತ್ತರ ಇತಿಹಾಸ ಹೊಂದಿದ್ದು, 50 ವರ್ಷಗಳಿಂದ ಡಾ.ಪಾಟೀಲ ಪುಟ್ಟಪ್ಪ ಅವರು ಅಧ್ಯಕ್ಷರಾಗಿ ಅವಿರೋಧ ಆಯ್ಕೆಯಾಗುತ್ತಾ ಬಂದಿದ್ದಾರೆ. ಆದರೆ, ಈ ಬಾರಿ ಅವರನ್ನು ಶತಾಯ ಗತಾಯ ಸೋಲಿಸಲೇಬೇಕು ಎಂದು ಹಿರಿಯ ಸಾಹಿತಿಗಳು ಪಣ ತೊಟ್ಟಿದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry