ಕನ್ನಡದಲ್ಲೇ ಸರಣಿ ಟ್ವೀಟ್‌ ಮಾಡಿದ ಪ್ರಧಾನಿ ಕಾರ್ಯಾಲಯ

ಮಂಗಳವಾರ, ಮಾರ್ಚ್ 19, 2019
33 °C
ರಾಮಕೃಷ್ಣ ವಿವೇಕಾನಂದ ಆಶ್ರಮದ ರಜತಯಾನ ಬೆಳ್ಳಿ ಹಬ್ಬ

ಕನ್ನಡದಲ್ಲೇ ಸರಣಿ ಟ್ವೀಟ್‌ ಮಾಡಿದ ಪ್ರಧಾನಿ ಕಾರ್ಯಾಲಯ

Published:
Updated:
ಕನ್ನಡದಲ್ಲೇ ಸರಣಿ ಟ್ವೀಟ್‌ ಮಾಡಿದ ಪ್ರಧಾನಿ ಕಾರ್ಯಾಲಯ

ತುಮಕೂರು: ರಾಮಕೃಷ್ಣ ವಿವೇಕಾನಂದ ಆಶ್ರಮದ ರಜತಯಾನ ಬೆಳ್ಳಿ ಹಬ್ಬದ ಸಮಾರೋಪ ಕಾರ್ಯಕ್ರಮದ ಪ್ರಯುಕ್ತ ಭಾನುವಾರ ಆಯೋಜಿಸಿದ್ದ ಯುವಶಕ್ತಿ ಆಸ್ಪೋಟನ ಕಾರ್ಯಕ್ರಮವನ್ನು ಉದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಅವರು ವಿಡಿಯೊ ಕಾನ್ಫರೆನ್ಸ್ ಮೂಲಕ ಭಾಷಣ ಮಾಡಿದ್ದು, ಭಾಷಣದ ಪ್ರಮುಖ ಅಂಶಗಳನ್ನು ಪ್ರಧಾನಿ ಕಾರ್ಯಾಲಯ ಕನ್ನಡದಲ್ಲೇ ಸರಣಿ ಟ್ವೀಟ್‌ ಮಾಡಿದೆ.

ಸರಣಿ ಟ್ವೀಟ್‌ಗಳನ್ನು ಮೋದಿ ಅವರ ವೈಯಕ್ತಿಕ ಟ್ವಿಟರ್ ಖಾತೆಯಲ್ಲೂ ರಿಟ್ವೀಟ್‌ ಮಾಡಲಾಗಿದೆ.

‘ಕನ್ನಡದಲ್ಲಿ ಭಾಷಣ ಆರಂಭಿಸಿದ ನರೇಂದ್ರ ಮೋದಿ ಸಿದ್ಧಗಂಗಾ ಸ್ಮಾಮೀಜಿ ಅವರ ಶಿಕ್ಷಣ ಸೇವೆಯನ್ನು ಶ್ಲಾಘಿಸಿದ್ದಾರೆ. ರಾಮಕೃಷ್ಣ ಪರಮಹಂಸರು ಹಾಗೂ ವಿವೇಕಾನಂದರ ದಾರಿಯಲ್ಲಿ ಸಿದ್ಧಗಂಗಾ ಸ್ವಾಮೀಜಿಯವರು ರಾಷ್ಟ್ರನಿರ್ಮಾಣ ಕೆಲಸದಲ್ಲಿ ತೊಡಗಿದ್ದಾರೆ’ ಎಂದರು.

ಸುಮಾರು 20 ನಿಮಿಷ ಭಾಷಣ ಮಾಡಿದ ಅವರು, ಯುವಜನತೆ ಮತ್ತು ರಾಮಕೃಷ್ಣ ವಿವೇಕಾನಂದ ಆಶ್ರಮದ ಭಕ್ತರನ್ನು ಉದ್ದೇಶಿಸಿ ಮಾತನಾಡಿದರು.

ಕಾರ್ಯಕ್ರಮಕ್ಕೆ ಖುದ್ದು ಹಾಜರಾಗುವ ಇಚ್ಛೆ ಇತ್ತು. ಆದರೆ ಅಧಿವೇಶನ ಇರುವುದರಿಂದ ಕಾರ್ಯಕ್ರಮಕ್ಕೆ ಹಾಜರಾಗಲು ಸಾಧ್ಯವಾಗಲಿಲ್ಲ ಎಂದು ಹೇಳಿದರು.

*

*

*

*
ತ್ರಿಪುರಾದ ಯುವಜನತೆ ಭಯ, ಭ್ರಷ್ಟಾಚಾರ ಮತ್ತು ಸ್ವಜನ-ಪಕ್ಷಪಾತದಿಂದ ಕೂಡಿದ ರಾಜಕೀಯವನ್ನು ಸೋಲಿಸಿದ್ದಾರೆ. ಯಾವುದೂ ಅಸಾಧ್ಯವಲ್ಲ ಎನ್ನುವುದನ್ನು ಅವರು ತೋರಿಸಿದ್ದಾರೆ: PM @narendramodi

*

*

*

*

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry