ಆಲ್‌ ಇಂಗ್ಲೆಂಡ್‌ನಲ್ಲಿ ಉತ್ತಮ ಆಟದ ಕನಸು: ಸಿಂಧು

ಮಂಗಳವಾರ, ಮಾರ್ಚ್ 26, 2019
32 °C

ಆಲ್‌ ಇಂಗ್ಲೆಂಡ್‌ನಲ್ಲಿ ಉತ್ತಮ ಆಟದ ಕನಸು: ಸಿಂಧು

Published:
Updated:
ಆಲ್‌ ಇಂಗ್ಲೆಂಡ್‌ನಲ್ಲಿ ಉತ್ತಮ ಆಟದ ಕನಸು: ಸಿಂಧು

ಹೈದರಾಬಾದ್‌: ‘ಆಲ್‌ ಇಂಗ್ಲೆಂಡ್‌ನಲ್ಲಿ ಪದಕ ಗೆಲ್ಲುವ ಕನಸಿದೆ. ಆದರೆ ಇದು ಸುಲಭದ ಹಾದಿಯಲ್ಲ. ಅದಕ್ಕಾಗಿ ಸಾಕಷ್ಟು ಪರಿಶ್ರಮಪಡಬೇಕಿದೆ. ಸಂಪೂರ್ಣ ಸಾಮರ್ಥ್ಯದೊಂದಿಗೆ ಪೈಪೋಟಿ ನಡೆಸಲು ಸಜ್ಜಾಗಿದ್ದೇನೆ’ ಎಂದು ಬ್ಯಾಡ್ಮಿಂಟನ್ ಆಟಗಾರ್ತಿ ಪಿ.ವಿ. ಸಿಂಧು ಹೇಳಿದ್ದಾರೆ.

ಮಾರ್ಚ್‌ 14ರಿಂದ ಆಲ್‌ ಇಂಗ್ಲೆಂಡ್ ಚಾಂಪಿಯನ್‌ಷಿಪ್‌ ಆರಂಭವಾಗಲಿದೆ. ಕಾಮನ್‌ವೆಲ್ತ್ ಕ್ರೀಡಾಕೂಟ ಆಸ್ಟ್ರೇಲಿಯಾದ ಗೋಲ್ಡ್‌ ಕೋಸ್ಟ್‌ನಲ್ಲಿ ಏಪ್ರಿಲ್‌ 4 ರಿಂದ ನಡೆಯಲಿದೆ.

‘ಈ ವರ್ಷ ಕ್ರೀಡಾಪಟುಗಳಿಗೆ ಸಾಕಷ್ಟು ಮಹತ್ವದ ಸವಾಲುಗಳಿವೆ. ಫಿಟ್‌ನೆಸ್ ಕಾಯ್ದುಕೊಂಡಿದ್ದರೆ ಮಾತ್ರ ನಿರಂತರವಾಗಿ ಆಡಲು ಸಾಧ್ಯ’ ಎಂದು ಅವರು ಹೇಳಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry