‘ಕಾಂಗ್ರೆಸ್‌ ವಿರುದ್ಧ ಮತ್ತೊಂದು ‘ಚಾರ್ಜ್‌ಶೀಟ್‌’ ಬಿಡುಗಡೆ’

7

‘ಕಾಂಗ್ರೆಸ್‌ ವಿರುದ್ಧ ಮತ್ತೊಂದು ‘ಚಾರ್ಜ್‌ಶೀಟ್‌’ ಬಿಡುಗಡೆ’

Published:
Updated:
‘ಕಾಂಗ್ರೆಸ್‌ ವಿರುದ್ಧ ಮತ್ತೊಂದು ‘ಚಾರ್ಜ್‌ಶೀಟ್‌’ ಬಿಡುಗಡೆ’

ಬೆಂಗಳೂರು: ಕಾಂಗ್ರೆಸ್‌ ವಿರುದ್ಧ ಶೀಘ್ರವೇ ಮತ್ತೊಂದು ‘ಚಾರ್ಜ್‌ಶೀಟ್‌’ ಬಿಡುಗಡೆ ಮಾಡುವುದಾಗಿ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಹೇಳಿದ್ದಾರೆ.

ಭಾನುವಾರ ಪಕ್ಷದ ಪ್ರಮುಖರ ಸಭೆಯ ಬಳಿಕ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಸರ್ಕಾರದ ಅಕ್ರಮಗಳು, ರೈತರ ಆತ್ಮಹತ್ಯೆ, ಬಿಜೆಪಿ ಕಾರ್ಯಕರ್ತರ ಕೊಲೆ ಮುಂತಾದ ವಿಷಯಗಳ ಕುರಿತು ಚಾರ್ಜ್‌ಶೀಟ್‌ ಸಿದ್ಧಪಡಿಸಲಾಗುತ್ತಿದೆ ಎಂದರು.

ಇದೇ 15ಕ್ಕೆ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ ನಗರಕ್ಕೆ ಬರಲಿದ್ದಾರೆ. ಅಂದು ಬೆಂಗಳೂರಿನಲ್ಲಿ ನಡೆಯುವ ರಕ್ಷಾಯಾತ್ರೆ ಸಮಾರೋಪದಲ್ಲಿ ಭಾಗವಹಿಸುವರು. ಅಲ್ಲದೆ, ಇದೇ 13ರಂದು ಪ್ರಧಾನಿ ನರೇಂದ್ರ ಮೋದಿ ರಾಯಚೂರಿನಲ್ಲಿ ನಡೆಯುವ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ. ಚಿಕ್ಕೋಡಿಯಲ್ಲಿ ನಡೆಯುವ ಸಮಾವೇಶದಲ್ಲೂ ಅವರು ಭಾಗವಹಿಸಲಿದ್ದಾರೆ. ಅದರ ದಿನಾಂಕ ನಿರ್ಧಾರವಾಗಿಲ್ಲ ಎಂದು ಯಡಿಯೂರಪ್ಪ ತಿಳಿಸಿದರು.

ವಿಧಾನಪರಿಷತ್‌ ವಿರೋಧ ಪಕ್ಷದ ನಾಯಕ ಕೆ.ಎಸ್‌. ಈಶ್ವರಪ್ಪ ನೇತೃತ್ವದಲ್ಲಿ ಇದೇ 7 ಅಥವಾ 10ರಂದು ಹಿಂದುಳಿದ ವರ್ಗಗಳ ಸಮಾವೇಶ ನಡೆಯಲಿದೆ. ಇದೇ 6ರಂದು ಮಂಗಳೂರಿನಲ್ಲಿ ನಡೆಯುವ ಜನಸುರಕ್ಷಾ ಯಾತ್ರೆಯ ಸಮಾರೋಪದಲ್ಲಿ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಭಾಗವಹಿಸಲಿದ್ದಾರೆ ಎಂದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry