ಬಸವೇಶ್ವರ ಪ್ರತಿಮೆ ಅನಾವರಣ

7

ಬಸವೇಶ್ವರ ಪ್ರತಿಮೆ ಅನಾವರಣ

Published:
Updated:
ಬಸವೇಶ್ವರ ಪ್ರತಿಮೆ ಅನಾವರಣ

ಹೊಸಕೋಟೆ: ಪಟ್ಟಣದ ತಾಲ್ಲೂಕು ಕಚೇರಿ ಎದುರು ನಿರ್ಮಿಸಿರುವ 16 ಅಡಿ ಎತ್ತರದ ಅಶ್ವಾರೂಢ ಬಸವೇಶ್ವರ ಕಂಚಿನ ಪ್ರತಿಮೆಯನ್ನು ಭಾನುವಾರ ಲೋಕಾರ್ಪಣೆ ಮಾಡಲಾಯಿತು.

ವೀರಶೈವ ಲಿಂಗಾಯತ ಸಮಾಜ ಮತ್ತು ಪ್ರತಿಮೆ ನಿರ್ಮಾಣ ಸಮಿತಿಯ ಸದಸ್ಯರು ದಾನಿಗಳ ನೆರವಿನಿಂದ ಇದನ್ನು ಸ್ಥಾಪಿಸಿದ್ದಾರೆ.

‘ಬಸವಣ್ಣನವರ ವಚನಗಳು ಇಂದಿಗೂ ಪ್ರಸ್ತುತ. ಅವರ ತತ್ವಾದರ್ಶಗಳನ್ನು ಪ್ರತಿಯೊಬ್ಬರೂ ಅಳವಡಿಸಿಕೊಳ್ಳಬೇಕು. ಇದರಿಂದ ಸಮಾಜದ ಸ್ವಾಸ್ಥ್ಯ ಕಾಪಾಡಲು ಸಹಕಾರಿ. ವಿಶ್ವ ಬಸವ ಪ್ರತಿಷ್ಠಾನವನ್ನು ಸ್ಥಾಪಿಸಲು ಉದ್ದೇಶಿಸಲಾಗಿದೆ’ ಎಂದು ಬೆಂಗಳೂರಿನ ಬೇಲಿ ಮಠದ ಶಿವರುದ್ರ ಸ್ವಾಮೀಜಿ ಹೇಳಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry