ಮಹನೀಯರ ಆದರ್ಶ ಪಾಲಿಸಲು ವಿದ್ಯಾರ್ಥಿಗಳಿಗೆ ಸಲಹೆ

7

ಮಹನೀಯರ ಆದರ್ಶ ಪಾಲಿಸಲು ವಿದ್ಯಾರ್ಥಿಗಳಿಗೆ ಸಲಹೆ

Published:
Updated:

ಬೆಟ್ಟದಪುರ (ಪಿರಿಯಾಪಟ್ಟಣ): ವಿದ್ಯಾರ್ಥಿಗಳು ಉತ್ತಮ ಆದರ್ಶ ಮೈಗೂಡಿಸಿಕೊಳ್ಳುವ ಮೂಲಕ ಭವಿಷ್ಯ ರೂಪಿಸಿಕೊಳ್ಳಬೇಕು ಎಂದು ಬಿಇಒ ಚಿಕ್ಕಸ್ವಾಮಿ ತಿಳಿಸಿದರು.

ತಾಲ್ಲೂಕಿನ ಬೆಟ್ಟದಪುರದ ಸರ್ಕಾರಿ ಪದವಿಪೂರ್ವ ಕಾಲೇಜಿನ ಪ್ರೌಢಶಾಲೆ ವಿಭಾಗದಲ್ಲಿ ಶನಿವಾರ ಆಯೋಜಿಸಿದ್ದ ಪರೀಕ್ಷಾ ಭಯ ನಿವಾರಣೆಗಾಗಿ ವಿದ್ಯಾರ್ಥಿಗಳೊಂದಿಗೆ ಸಂವಾದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಹೆಚ್ಚು ಅಂಕಗಳಿಸುವುದೊಂದೇ ಗುರಿಯಾಗದೆ, ದೇಶ ಪ್ರೇಮ, ರಾಷ್ಟ್ರೀಯ ಭಾವೈಕ್ಯತೆ ಬೆಳೆಸಿಕೊಳ್ಳಬೇಕು. ಆತಂಕಕ್ಕೆ ಒಳಗಾಗದೇ ಶಾಂತ ರೀತಿಯಲ್ಲಿ ಪರೀಕ್ಷೆ ಬರೆಯಬೇಕು ಎಂದು ಸಲಹೆ ನೀಡಿದರು.

ಉಪಪ್ರಾಂಶುಪಾಲ ಬಿ.ಎಸ್.ರೇವಣ್ಣ ಮಾತನಾಡಿ, ಸರ್ಕಾರಿ ಶಾಲೆಯ ಪ್ರತಿ ವಿದ್ಯಾರ್ಥಿಯೂ ದೇಶದ ದೊಡ್ಡ ಆಸ್ತಿಯಾಗಿದ್ದು, ಭಾರತ ವಿಶ್ವದಲ್ಲಿಯೇ ಅತ್ಯಂತ ಬುದ್ಧಿವಂತ ವಿದ್ಯಾರ್ಥಿಗಳಿರುವ ದೇಶ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ವಿದ್ಯಾರ್ಥಿಗಳು ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಬಿಆರ್‌ಸಿ ಹೇಮಂತ್ ರಾಜ್, ಬಿಆರ್‌ಪಿ ವಸಂತಶೇಖರ್, ಅಕ್ಷರ ದಾಸೋಹ ಉಪನಿರ್ದೇಶಕ ಶಿವರಾಜ್, ಸಿಆರ್‌ಪಿ ಹರೀಶ್ ಮಾತನಾಡಿದರು.

ಕಾರ್ಯಕ್ರಮದಲ್ಲಿ ಶಾಲೆಯ ಎಸ್.ಡಿ.ಎಂ.ಸಿ ಅಧ್ಯಕ್ಷ ಜಗದೀಶ್, ಸಿ.ಆರ್.ಪಿಗಳಾದ ಮಂಜುನಾಥ, ದೇವರಾಜು, ದೈಹಿಕ ಶಿಕ್ಷಣ ಶಿಕ್ಷಕ ಮಹದೇವಪ್ಪ, ರಾಜೇಂದ್ರ, ಚೇತನ, ರಮೇಶ್, ಮೈಲಾರಿ, ಸರಿತಾ ಕುಮಾರಿ, ಶಿಕ್ಷಕರು, ವಿದ್ಯಾರ್ಥಿಗಳು ಹಾಜರಿದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry