ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಮಹದಾಯಿ: ಸುಪ್ರೀಂ ಕೋರ್ಟ್‌ನಲ್ಲಿ ಶೀಘ್ರವೇ ಪಿಐಎಲ್‌‘

Last Updated 5 ಮಾರ್ಚ್ 2018, 10:10 IST
ಅಕ್ಷರ ಗಾತ್ರ

ಹುಬ್ಬಳ್ಳಿ: ಮಹದಾಯಿ ಕುಡಿಯುವ ನೀರು ಯೋಜನೆ ಸಂಬಂಧ ಸುಪ್ರೀಂ ಕೋರ್ಟ್‌ನಲ್ಲಿ ಶೀಘ್ರದಲ್ಲೇ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್‌) ಸಲ್ಲಿಸಲಾಗುವುದು ಎಂದು ರೈತ ಸೇನಾ ಕರ್ನಾಟಕ ರಾಜ್ಯ ಘಟಕ ಅಧ್ಯಕ್ಷ ವೀರೇಶ ಸೊಬರದಮಠ ಭಾನುವಾರ ಇಲ್ಲಿ ಸುದ್ದಿಗಾರರಿಗೆ ತಿಳಿಸಿದರು.

ಮಹದಾಯಿ ಹೋರಾಟಕ್ಕೆ ಬೆಂಬಲ ಸೂಚಿಸಿ ಭಾರತೀಯ ವೈದ್ಯಕೀಯ ಸಂಘವು(ಐಎಂಎ) ಬೆಂಗಳೂರಿನಿಂದ ನರಗುಂದದವರೆಗೆ ಹಮ್ಮಿಕೊಂಡಿದ್ದ ‘ವೈದ್ಯರ ನಡಿಗೆ ರೈತರ ಕಡೆಗೆ’ ಪಾದಯಾತ್ರೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.

‘ಕುಡಿಯುವ ನೀರಿನ ವಿಚಾರದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್‌ ಎರಡೂ ರಾಜಕೀಯ ಮಾಡುತ್ತಿವೆ. ಎರಡೂ ಪಕ್ಷಗಳಿಗೆ ಬುದ್ಧಿ ಕಲಿಸಬೇಕಾದರೆ ಕೋರ್ಟ್‌ ಮೊರೆ ಹೋಗುವುದು ಅನಿವಾರ್ಯ. ನರಗುಂದದಲ್ಲಿ ರೈತರು ನಡೆಸುತ್ತಿರುವ ಹೋರಾಟ ಮುಂದುವರಿಯಲಿದೆ. ಪ್ರಧಾನಿ ನರೇಂದ್ರ ಮೋದಿ, ರಾಷ್ಟ್ರಪತಿ ರಾಮನಾಥ ಕೋವಿಂದ್‌ ಅವರಿಗೆ ಪತ್ರ ಬರೆಯುವ ಮೂಲಕ ಪತ್ರ ಚಳವಳಿ ಸಹ ನಡೆಸಲಾಗುವುದು’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT