ನಾಲ್ಕು ಕ್ಷೇತ್ರಗಳಲ್ಲಿ ಸಿಪಿಎಂ ಸ್ಪರ್ಧೆ

ಬುಧವಾರ, ಮಾರ್ಚ್ 20, 2019
26 °C

ನಾಲ್ಕು ಕ್ಷೇತ್ರಗಳಲ್ಲಿ ಸಿಪಿಎಂ ಸ್ಪರ್ಧೆ

Published:
Updated:
ನಾಲ್ಕು ಕ್ಷೇತ್ರಗಳಲ್ಲಿ ಸಿಪಿಎಂ ಸ್ಪರ್ಧೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ನಾಲ್ಕು ವಿಧಾನಸಭಾ ಕ್ಷೇತ್ರಗಳಲ್ಲಿ ಸಿಪಿಎಂ ಸ್ಪರ್ಧಿಸಲಿದೆ ಎಂದು ಪಕ್ಷದ ಜಿಲ್ಲಾ ಸಮಿತಿ ಕಾರ್ಯದರ್ಶಿ ಕೆ.ವಸಂತ ಆಚಾರಿ ತಿಳಿಸಿದರು.

ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ' ಮಂಗಳೂರು (ಉಳ್ಳಾಲ) ಕ್ಷೇತ್ರದಿಂದ ವಕೀಲ ‌ನಿತಿನ್ ಕುಮಾರ್ ಕುತ್ತಾರ್, ಮಂಗಳೂರು ದಕ್ಷಿಣ ಕ್ಷೇತ್ರದಲ್ಲಿ ಸಿಐಟಿಯು ಜಿಲ್ಲಾ ಸಮಿತಿ ಕಾರ್ಯದರ್ಶಿ ಸುನಿಲ್ ಕುಮಾರ್ ಬಜಾಲ್, ಮಂಗಳೂರು ಉತ್ತರ ಕ್ಷೇತ್ರದಿಂದ ಡಿವೈಎಫ್ಐ ರಾಜ್ಯ ಘಟಕದ ಅಧ್ಯಕ್ಷ ಮುನೀರ್ ಕಾಟಿಪಳ್ಳ ಮತ್ತು ಮೂಡುಬಿದಿರೆ ಕ್ಷೇತ್ರದಲ್ಲಿ ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾ ಸಮಿತಿ ಪ್ರಧಾನ ಕಾರ್ಯದರ್ಶಿ ಕೆ.ಯಾದವ ಶೆಟ್ಟಿ ಸ್ಪರ್ಧಿಸುವರು' ಎಂದು ಪ್ರಕಟಿಸಿದರು.

ಪಕ್ಷದ ರಾಜ್ಯ ಸಮಿತಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಿ ಕಳುಹಿಸಿದ್ದ ಪಟ್ಟಿಗೆ ರಾಜ್ಯ ಸಮಿತಿ ಅನುಮೋದನೆ ನೀಡಿದೆ. ಪಕ್ಷದ ಕೇಂದ್ರ ಸಮಿತಿಗೆ ಪಟ್ಟಿಯನ್ನು ರವಾನಿಸಲಾಗಿದೆ' ಎಂದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry