ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಾಕಿ: ಭಾರತಕ್ಕೆ ಆಸ್ಟ್ರೇಲಿಯಾ ಸವಾಲು

Last Updated 5 ಮಾರ್ಚ್ 2018, 19:30 IST
ಅಕ್ಷರ ಗಾತ್ರ

ಇಪೊ, ಮಲೇಷ್ಯಾ: ಮೊದಲ ಎರಡು ಪಂದ್ಯಗಳಲ್ಲಿ ಜಯ ಗಳಿಸಲು ವಿಫಲವಾಗಿರುವ ಭಾರತ ತಂಡ ಅಜ್ಲಾನ್ ಶಾ ಕಪ್ ಹಾಕಿ ಟೂರ್ನಿಯ ನಿರ್ಣಾಯಕ ಪಂದ್ಯದಲ್ಲಿ ಮಂಗಳವಾರ ಆಸ್ಟ್ರೇಲಿಯಾವನ್ನು ಎದುರಿಸಲಿದೆ.

ಮೊದಲ ಪಂದ್ಯದಲ್ಲಿ ಒಲಿಂಪಿಕ್‌ ಚಾಂಪಿಯನ್‌ ಅರ್ಜೆಂಟೀನಾ ವಿರುದ್ಧ 2–3ರಿಂದ ಸೋತ ಭಾರತ ನಂತರ ಇಂಗ್ಲೆಂಡ್‌ ಎದುರಿನ ಪಂದ್ಯದಲ್ಲಿ ಡ್ರಾ ಸಾಧಿಸಿತ್ತು. ಈಗ ವಿಶ್ವ ಚಾಂಪಿಯನ್ನರ ಸವಾಲನ್ನು ಮೆಟ್ಟಿ ನಿಲ್ಲಬೇಕಾಗಿದೆ. ತಂಡದ ಖಾತೆಯಲ್ಲಿ ಈಗ ಕೇವಲ ಒಂದು ಪಾಯಿಂಟ್ ಇದೆ.

ಇಂಗ್ಲೆಂಡ್ ಮತ್ತು ಮಲೇಷ್ಯಾ ವಿರುದ್ಧ ಗೆದ್ದಿರುವ ಆಸ್ಟ್ರೇಲಿಯಾ ಪಾಯಿಂಟ್ ಪಟ್ಟಿಯ ಅಗ್ರ ಸ್ಥಾನದಲ್ಲಿದೆ. ಟೂರ್ನಿಯಲ್ಲಿ ಮುಂದಿನ ಹಂತಕ್ಕೆ ಸಾಗಬೇಕಾದರೆ ಮಂಗಳವಾರದ ಪಂದ್ಯದಲ್ಲಿ ಸೋಲು ತಪ್ಪಿಸಿಕೊಳ್ಳುವುದು ಭಾರತಕ್ಕೆ ಅನಿವಾರ್ಯ ಆಗಲಿದೆ.

ಪರಿಣಿತ ತಂಡದೊಂದಿಗೆ ಆಸ್ಟ್ರೇಲಿಯಾ ಇಲ್ಲಿಗೆ ಬಂದಿಳಿದಿದೆ. ಯುವ ಆಟಗಾರರನ್ನು ಒಳಗೊಂಡಿರುವ ಭಾರತ ತಂಡದಲ್ಲಿ ಅನೇಕರಿಗೆ ಹೆಚ್ಚಿನ ಅಂತರರಾಷ್ಟ್ರೀಯ ಪಂದ್ಯಗಳನ್ನು ಆಡಿದ ಅನುಭವ ಇಲ್ಲ.

ಮೊದಲ ಎರಡು ಪಂದ್ಯಗಳಲ್ಲಿ ಅವಕಾಶಗಳನ್ನು ಕೈಚೆಲ್ಲಿದ್ದೇ ಭಾರತದ ಪಾಲಿಗೆ ಮುಳುವಾಯಿತು. ಇಂಗ್ಲೆಂಡ್‌ ವಿರುದ್ಧ ಗೆಲ್ಲಲು ಉತ್ತಮ ಅವಕಾಶವಿತ್ತು. ಒಂಬತ್ತು ಪೆನಾಲ್ಟಿ ಕಾರ್ನರ್‌ಗಳ ಪೈಕಿ ಒಂದರಲ್ಲಿ ಕೂಡ ಯಶಸ್ಸು ಕಾಣಲು ತಂಡಕ್ಕೆ ಸಾಧ್ಯವಾಗಲಿಲ್ಲ. ಹೀಗಾಗಿ ಬಲಿಷ್ಠ ರಕ್ಷಣಾ ವಿಭಾಗವನ್ನು ಹೊಂದಿರುವ ಆಸ್ಟ್ರೇಲಿಯಾ ವಿರುದ್ಧ ಯಶಸ್ಸು ಗಳಿಸಲು ಭಾರಿ ಪ್ರಯತ್ನಪಡಬೇಕಾದೀತು.

ಇಂದಿನ ಪಂದ್ಯಗಳು
ಇಂಗ್ಲೆಂಡ್‌ –ಐರ್ಲೆಂಡ್‌
ಮಧ್ಯಾಹ್ನ 1.30.

ಭಾರತ–ಆಸ್ಟ್ರೇಲಿಯಾ
ಮಧ್ಯಾಹ್ನ 3.30.

ಮಲೇಷ್ಯಾ– ಅರ್ಜೆಂಟೀನಾ
ಸಂಜೆ 6.00.

ನೇರ ಪ್ರಸಾರ: ಸ್ಟಾರ್‌ ಸ್ಪೋರ್ಟ್ಸ್ .

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT