ರಾಷ್ಟ್ರೀಯ ಹೆದ್ದಾರಿಗಳಿಗೆ ಮೇಲ್ದರ್ಜೆ ಯೋಗ

7

ರಾಷ್ಟ್ರೀಯ ಹೆದ್ದಾರಿಗಳಿಗೆ ಮೇಲ್ದರ್ಜೆ ಯೋಗ

Published:
Updated:
ರಾಷ್ಟ್ರೀಯ ಹೆದ್ದಾರಿಗಳಿಗೆ ಮೇಲ್ದರ್ಜೆ ಯೋಗ

ನವದೆಹಲಿ: ದೇಶದ ಎಲ್ಲಾ ರಾಷ್ಟ್ರೀಯ ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಬೃಹತ್‌ ಯೋಜನೆಯೊಂದನ್ನು ಕೇಂದ್ರ ಸರ್ಕಾರ ಸಿದ್ಧಪಡಿಸಿದೆ.

ಪ್ರತಿನಿತ್ಯ ಸಂಚರಿಸುವ ವಾಹನಗಳ ಸಂಖ್ಯೆ ಮತ್ತು ಸಂಚಾರ ದಟ್ಟಣೆಯ ಆಧಾರದ ಮೇಲೆ ಎರಡು ಪಥದ ಹೆದ್ದಾರಿಗಳನ್ನು ನಾಲ್ಕು ಇಲ್ಲವೇ ಆರು ಪಥದ ಹೆದ್ದಾರಿಗಳನ್ನಾಗಿ ಅಭಿವೃದ್ಧಿಪಡಿಸಲಾಗುವುದು ಎಂದು ಕೇಂದ್ರ ಭೂಸಾರಿಗೆ ಮತ್ತು ಹೆದ್ದಾರಿ ಸಚಿವಾಲಯದ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ತುರ್ತಾಗಿ ಅಭಿವೃದ್ಧಿಪಡಿಸಬೇಕಾಗದ ಹೆದ್ದಾರಿಗಳ ಪಟ್ಟಿ ಈಗಾಗಲೇ ಕೇಂದ್ರ ಭೂಸಾರಿಗೆ ಮತ್ತು ಹೆದ್ದಾರಿ ಸಚಿವಾಲಯದ ಕೈಸೇರಿದೆ. ಕಾಮಗಾರಿ ಆರಂಭಿಸುವ ಮೊದಲು ಹೆದ್ದಾರಿ ಸಾಮರ್ಥ್ಯ ಮೌಲ್ಯಮಾಪನ ವರದಿ ಸಿದ್ಧಪಡಿಸಲು ತೀರ್ಮಾನಿಸಲಾಗಿದೆ.

ಮೊದಲ ಹಂತದ ಅಭಿವೃದ್ಧಿ ಕಾಮಗಾರಿ ಶೀಘ್ರ ಆರಂಭವಾಗಲಿದ್ದು, ಹಂತ, ಹಂತವಾಗಿ ಉಳಿದ ರಾಷ್ಟ್ರೀಯ ಹೆದ್ದಾರಿಗಳನ್ನೂ ಅಭಿವೃದ್ಧಿಪಡಿಸಲಾಗುವುದು ಎಂದು ಅಧಿಕಾರಿ ತಿಳಿಸಿದ್ದಾರೆ.

ಪ್ರತಿನಿತ್ಯ 10 ಸಾವಿರ ವಾಹನ ಸಂಚರಿಸುವ ಹೆದ್ದಾರಿಗಳನ್ನು ಚತುಷ್ಪಥ ಮತ್ತು 20 ಸಾವಿರ ಅಥವಾ ಅದಕ್ಕೂ ಹೆಚ್ಚು ವಾಹನ ಸಂಚರಿಸುವ ಹೆದ್ದಾರಿಗಳನ್ನು ಷಟ್ಪಥಗಳನ್ನಾಗಿ ಅಭಿವೃದ್ಧಿಪಡಿಸಲಾಗುವುದು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry