ಹೈ.ಕ.ದಲ್ಲಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಆಕ್ರೋಶ

5

ಹೈ.ಕ.ದಲ್ಲಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಆಕ್ರೋಶ

Published:
Updated:
ಹೈ.ಕ.ದಲ್ಲಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಆಕ್ರೋಶ

ರಾಯಚೂರು: ಹೈ.ಕ. ಭಾಗಕ್ಕೆ ಗದಗ ಜಿಲ್ಲೆ ರೋಣ ತಾಲ್ಲೂಕಿನ 60 ಗ್ರಾಮಗಳನ್ನು ಸೇರ್ಪಡೆ ಮಾಡುವುದಕ್ಕೆ ಸಚಿವ ಸಂಪುಟವು ಕಳೆದ ಸಭೆಯಲ್ಲಿ ತೀರ್ಮಾನ ಕೈಗೊಂಡಿರುವುದಕ್ಕೆ ಸಂಘ–ಸಂಸ್ಥೆಗಳಿಂದ ಭಾರಿ ವಿರೋಧ ವ್ಯಕ್ತವಾಗಿದೆ.

ಹೈ.ಕ. ಭಾಗದ ಎಲ್ಲ ಜಿಲ್ಲೆಗಳಲ್ಲೂ ಬುಧವಾರದಿಂದ ಸರ್ಕಾರದ ವಿರುದ್ಧ ಹೋರಾಟಗಳು ನಡೆಯಲಿವೆ. ಈ ಬಗ್ಗೆ ವಿವಿಧ ಸಂಘಟನೆಗಳ ಮುಖಂಡರು ರಾಯಚೂರಿನಲ್ಲಿ ಮಂಗಳವಾರ ಪತ್ರಿಕಾಗೋಷ್ಠಿ ನಡೆಸಿದರು.

ಹೈದರಾಬಾದ್‌ ಕರ್ನಾಟಕ ಹೋರಾಟ ಸಮಿತಿಯ ಕಾರ್ಯದರ್ಶಿ ಪ್ರೊ.ರಜಾಕ್‌ ಉಸ್ತಾದ್‌ ಸೇರಿದಂತೆ ಕನ್ನಡ ಸಂಘಟನೆ ಹಾಗೂ ದಲಿತ ಸಂಘಟನೆಗಳ ಮುಖಂಡರು ಇದ್ದರು.

 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry