ಕಾಂಗ್ರೆಸ್ ತೊರೆದು ಜೆಡಿಎಸ್‌ ಸೇರ್ಪಡೆ

7
ಬೆಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಜೆಡಿಎಸ್‌ ಅಭ್ಯರ್ಥಿಯಾಗಿ ಪ್ರಭಾಕರ್‌ ರೆಡ್ಡಿ ಕಣಕ್ಕೆ

ಕಾಂಗ್ರೆಸ್ ತೊರೆದು ಜೆಡಿಎಸ್‌ ಸೇರ್ಪಡೆ

Published:
Updated:
ಕಾಂಗ್ರೆಸ್ ತೊರೆದು ಜೆಡಿಎಸ್‌ ಸೇರ್ಪಡೆ

ಆನೇಕಲ್‌: ಬೆಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಜೆಡಿಎಸ್‌ ಅಭ್ಯರ್ಥಿಯಾಗಿ ಮೈಲಸಂದ್ರದ ಆರ್.ಪ್ರಭಾಕರ್‌ರೆಡ್ಡಿ ಅವರನ್ನು ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಘೋಷಿಸಿದರು.

ಅವರ ಪಕ್ಷ ಸೇರ್ಪಡೆ ಕಾರ್ಯ ಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಹಲವು ಒತ್ತಡ ಗಳಿಂದಾಗಿ ಜೆಡಿಎಸ್‌ನಲ್ಲಿದ್ದ ಪ್ರಭಾಕರ್‌ರೆಡ್ಡಿ ಕಾಂಗ್ರೆಸ್ ಸೇರ್ಪಡೆ ಯಾಗಿದ್ದರು. ಆದರೆ, ಅಲ್ಲಿಯ ವಾತಾವರಣದಿಂದ ಬೇಸತ್ತು ಕಾಂಗ್ರೆಸ್ ತೊರೆದು ಜೆಡಿಎಸ್‌ ಸೇರ್ಪಡೆ ಯಾಗಿದ್ದಾರೆ ಎಂದರು.

ಕಳೆದ ಚುನಾವಣೆಯಲ್ಲಿ ಬೆಂಗ ಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿ 72ಸಾವಿರ ಮತ ಪಡೆದು ಕಡಿಮೆ ಅಂತರದಿಂದ ಪರಾಜಿತ ಹೊಂದಿದ್ದರು. ಐದು ವರ್ಷಗಳಿಂದ ಕ್ಷೇತ್ರದಲ್ಲಿ ನಿರಂತರ ಸಂಪರ್ಕ ಹೊಂದಿರುವ ಅವರನ್ನು ದಕ್ಷಿಣ ವಿಧಾನಸಭಾ ಕ್ಷೇತ್ರದಿಂದ ಕಣಕಿಳಿಸುತ್ತಿದ್ದು, ಅವರನ್ನು ಕಾರ್ಯಕರ್ತರು ಬೆಂಬಲಿಸಬೇಕು. ಈ ಭಾಗದಲ್ಲಿ ಜೆಡಿಎಸ್ ಬಲಿಷ್ಠವಾಗಿದ್ದು, ಕ್ಷೇತ್ರದ ಜೊತೆ ತಾವು ನಿರಂತರ ಸಂಪರ್ಕ ಹೊಂದಿ ಗೆಲುವಿಗೆ ಶ್ರಮಿಸಲಾಗುವುದು ಎಂದು ತಿಳಿಸಿದರು.

ರಾಜ್ಯವನ್ನು ಬಿಜೆಪಿ ಕೊಳ್ಳೆ ಹೊಡೆದ ಕಾರಣ ಕಳೆದ ಚುನಾವಣೆಯಲ್ಲಿ ರಾಜ್ಯದ ಜನರು ಬಿಜೆಪಿ ತಿರಸ್ಕರಿಸಿದರು. ಇದೀಗ ಆಡಳಿತ ನಡೆಸುತ್ತಿರುವ ಕಾಂಗ್ರೆಸ್‌ನ ದುರಾಡಳಿತ ಹಾಗೂ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಅಹಂಕಾರ ಮಾತುಗಳಿಂದ ಜನರು ಬೇಸತ್ತು ಭ್ರಮನಿರಸನಗೊಂಡಿದ್ದು ಪ್ರಾದೇಶಿಕ ಪಕ್ಷ ಜೆಡಿಎಸ್‌ಗೆ ರಾಜ್ಯದ ಜನರು ಸಂಪೂರ್ಣ ಬೆಂಬಲ ನೀಡಲಿದ್ದು, ಅಧಿಕಾರದ ಚುಕ್ಕಾಣಿ ಹಿಡಿಯುವುದು ಖಚಿತ ಎಂದು ತಿಳಿಸಿದರು.

ಜೆಡಿಎಸ್ ಪ್ರಧಾನ ಕಾರ್ಯದರ್ಶಿ ಗೊಟ್ಟಿಗೆರೆ ಮಂಜುನಾಥ್ ಮಾತನಾಡಿ, ಆನೇಕಲ್ ತಾಲ್ಲೂಕಿನ ಜಿಗಣಿ ಹೋಬಳಿ ಸೇರಿದಂತೆ ಎಲ್ಲೆಡೆ ಜೆಡಿಎಸ್ ಪರವಾದ ಅಲೆ ಬೆಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿದ್ದು, ಪ್ರಭಾಕರ್‌ರೆಡ್ಡಿ ಅವರಿಗೆ ಕ್ಷೇತ್ರದಲ್ಲಿ ಉತ್ತಮ ಅವಕಾಶವಿದೆ ಎಂದರು.

ಎಲ್ಲರೂ ಒಗ್ಗೂಡಿ ಕೆಲಸ ಮಾಡಿ ರಾಜ್ಯದಲ್ಲಿ ಕುಮಾರಸ್ವಾಮಿ ಅವರ ನೇತೃತ್ವದ ಸರ್ಕಾರ ಅಧಿಕಾರಕ್ಕೆ ತರಲು ಶ್ರಮಿಸಬೇಕು ಎಂದರು.

ಬ್ಲಾಕ್ ಜೆಡಿಎಸ್‌ ಅಧ್ಯಕ್ಷ ದೊಡ್ಡಕಲ್ಲಸಂದ್ರದ ಬಿ.ದೇವರಾಜು, ಜೆ.ಟಿ.ಪ್ರಕಾಶ್, ರವಿ, ಮಂಜುನಾಥರೆಡ್ಡಿ, ಬಾಬು ಹಾಜರಿದ್ದರು.

***

ಸಂಪರ್ಕದಿಂದ ಕ್ಷೇತ್ರದಲ್ಲಿ ಕೆಲಸ

ಜೆಡಿಎಸ್‌ನ ಬೆಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಆರ್.ಪ್ರಭಾಕರ್‌ರೆಡ್ಡಿ ಮಾತನಾಡಿ, ಒಮ್ಮೆ ಲೋಕಸಭೆ ಅಭ್ಯರ್ಥಿ ಹಾಗೂ ಕಳೆದ ವಿಧಾನಸಭಾ ಚುನಾವಣೆಯಲ್ಲಿ ದಕ್ಷಿಣ ವಿಧಾನಸಭಾ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದೇನೆ. ಕಾರಣಾಂತರಗಳಿಂದ ಪಕ್ಷ ತೊರೆದು ಕೆಲ ಕಾಲ ಕಾಂಗ್ರೆಸ್‌ನಲ್ಲಿ ಗುರುತಿಸಿಕೊಂಡಿದ್ದೆ ಎಂದರು.

ರಾಜ್ಯ ಘಟಕದ ಅಧ್ಯಕ್ಷ ಕುಮಾರಸ್ವಾಮಿ ಹಾಗೂ ಜೆಡಿಎಸ್‌ ರಾಷ್ಟ್ರಾಧ್ಯಕ್ಷ ಎಚ್.ಡಿ.ದೇವೇಗೌಡ ಅವರು ವಿಶ್ವಾಸವಿಟ್ಟು ಕ್ಷೇತ್ರದ ಅಭ್ಯರ್ಥಿಯಾಗಿ ಘೋಷಿಸಿದ್ದಾರೆ. ನಿರಂತರ ಜನರ ಸಂಪರ್ಕದಿಂದ ಕ್ಷೇತ್ರದಲ್ಲಿ ಹಲವು ಸಾಮಾಜಿಕ ಕೆಲಸಗಳ ಮೂಲಕ ಜನರ ಸಮಸ್ಯೆಗಳಿಗೆ ಸ್ಪಂದಿಸಿದ್ದೇನೆ ಎಂದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry