ಭಾರತದ ವಿರುದ್ಧ ಐದು ವಿಕೆಟ್‌ಗಳಿಂದ ಗೆದ್ದ ಶ್ರೀಲಂಕಾ

7

ಭಾರತದ ವಿರುದ್ಧ ಐದು ವಿಕೆಟ್‌ಗಳಿಂದ ಗೆದ್ದ ಶ್ರೀಲಂಕಾ

Published:
Updated:
ಭಾರತದ ವಿರುದ್ಧ ಐದು ವಿಕೆಟ್‌ಗಳಿಂದ ಗೆದ್ದ ಶ್ರೀಲಂಕಾ

ಕೊಲಂಬೊ: ಇಲ್ಲಿ ನಡೆದ ಭಾರತ, ಶ್ರೀಲಂಕಾ ಮತ್ತು ಬಾಂಗ್ಲಾದೇಶ ತಂಡಗಳನ್ನು ಒಳಗೊಂಡ ‘ನಿದಾಸ್‌’ ಕಪ್‌ ತ್ರಿಕೋನ ಟ್ವೆಂಟಿ–20 ಸರಣಿಯ ಮೊದಲ ಪಂದ್ಯದಲ್ಲಿ ‘ಯುವ ಭಾರತ’ ತಂಡದ ವಿರುದ್ಧ ಶ್ರೀಲಂಕಾ ಐದು ವಿಕೆಟ್‌ ಜಯ ಸಾಧಿಸಿದೆ.

ಭಾರತದ ಎದುರು ಟಾಸ್‌ ಗೆದ್ದ ಶ್ರೀಲಂಕಾ ಬೌಲಿಂಗ್‌ ಆಯ್ಕೆ ಮಾಡಿಕೊಂಡಿತು. ಬ್ಯಾಟಿಂಗ್‌ ಆರಂಭಿಸಿದ ಭಾರತ ರೋಹಿತ್‌ ಶರ್ಮಾ(0) ವಿಕೆಟ್‌ ಕಳೆದುಕೊಂಡು ಆರಂಭಿಕ ಆಘಾತ ಎದುರಿಸಿತು. ಆದರೆ ಶಿಖರ್‌ ಧವನ್‌ ಭರ್ಜರಿ ಬ್ಯಾಟಿಂಗ್‌ ನೆರವಿನಿಂದ  5 ವಿಕೆಟ್‌ ನಷ್ಟಕ್ಕೆ 174 ರನ್‌ ಗಳಿಸಿದೆ.

175 ರನ್‌ ಗುರಿ ಬೆನ್ನತ್ತಿದ ಶ್ರೀಲಂಕಾ ಕುಶಲ್‌ ಪೆರೆರಾ(66 ರನ್‌ 37 ಎಸೆತ) ಉತ್ತಮ ಬ್ಯಾಟಿಂಗ್‌ ನೆರವಿನಿಂದ 9 ಎಸೆತಗಳು ಬಾಕಿ ಇರುವಾಗಲೇ ಗೆಲುವಿನ ನಗೆ ಬೀರಿದೆ. 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry