ಜೈಲಿಗೆ ಹೋಗುವ ಬದಲು ಕಾಂಗ್ರೆಸ್‌ಗೆ ಖೇಣಿ: ಜಾವಡೇಕರ್

7

ಜೈಲಿಗೆ ಹೋಗುವ ಬದಲು ಕಾಂಗ್ರೆಸ್‌ಗೆ ಖೇಣಿ: ಜಾವಡೇಕರ್

Published:
Updated:

ನವದೆಹಲಿ: ಜೈಲು ಸೇರಬೇಕಿದ್ದ ಅಶೋಕ್ ಖೇಣಿ ಅವರನ್ನು ಕಾಂಗ್ರೆಸ್‌ಗೆ ಸೇರಿಸಿಕೊಳ್ಳುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಧಾನಿ ಹೇಳಿದಂತೆಯೇ ತಮ್ಮದು ‘ಸೀದಾ ರೂಪಯ್ಯಾ’ ಸರ್ಕಾರ ಎಂಬುದನ್ನು ಸಾಬೀತು ಮಾಡಿದ್ದಾರೆ ಎಂದು ಕೇಂದ್ರ ಸಚಿವ ಪ್ರಕಾಶ್‌ ಜಾವಡೇಕರ್‌ ಟೀಕಿಸಿದರು.

ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಖೇಣಿ ಅವರನ್ನು ಭ್ರಷ್ಟ ಎಂದು ಜರಿಯುತ್ತಿದ್ದ ಸಿದ್ದರಾಮಯ್ಯ ಅವರೇ ಇದೀಗ ಅವರನ್ನು ಕಾಂಗ್ರೆಸ್‌ಗೆ ಸೇರಿಸಿಕೊಂಡಿರುವುದರಿಂದ ಪ್ರಧಾನಿ ಮೋದಿ ಅವರ ಹೇಳಿಕೆ ಋಜುವಾತಾಗಿದೆ ಎಂದರು.

ನೂರಾರು ಕೋಟಿ ಅವ್ಯವಹಾರದಲ್ಲಿ ತೊಡಗಿರುವ ಹಾಗೂ ರೈತರ ಜಮೀನು ದುರ್ಬಳಕೆ ಮಾಡಿಕೊಂಡಿರುವ ಖೇಣಿ ಅವರನ್ನು ಜೈಲಿಗೆ ಕಳುಹಿಸಬೇಕು ಎಂದು ಹೇಳುತ್ತಿದ್ದ ಸಿದ್ದರಾಮಯ್ಯ, ಜೈಲಿಗೆ ಕಳುಹಿಸುವ ಬದಲು ಕಾಂಗ್ರೆಸ್‌ಗೆ ಸೇರಿಸಿಕೊಳ್ಳುವ ಮೂಲಕ ಭ್ರಷ್ಟಾಚಾರಕ್ಕೆ ಕುಮ್ಮಕ್ಕು ನೀಡುವುದನ್ನು ಸಾಬೀತುಪಡಿಸಿದ್ದಾರೆ ಎಂದು ಅವರು ದೂರಿದರು.

ಕಾಂಗ್ರೆಸ್ ಸರ್ಕಾರ ಕರ್ನಾಟಕದಲ್ಲಿ ಸ್ವಯಂಕೃತ ಅಪರಾಧ ಎಸಗುವ ಮೂಲಕ ಪಾತಾಳಕ್ಕೆ ಕುಸಿಯುತ್ತಿದೆ. ಕಾಂಗ್ರೆಸ್‌ ಮುಖಂಡರು ಗೂಂಡಾಗಿರಿ ಮಾಡುತ್ತಿದ್ದಾರೆ ಎಂದು ವಿಧಾನಸಭೆ ಚುನಾವಣೆಯ ರಾಜ್ಯ ಬಿಜೆಪಿ ಉಸ್ತುವಾರಿ ಆಗಿರುವ ಜಾವಡೇಕರ್‌ ಆರೋಪಿಸಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry