ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜೇಶ ಮಡಿವಾಳಗೆ ಮುಖ್ಯಮಂತ್ರಿ ಚಿನ್ನದ ಪದಕ

Last Updated 7 ಮಾರ್ಚ್ 2018, 10:39 IST
ಅಕ್ಷರ ಗಾತ್ರ

ಕುಮಟಾ: ಇಲ್ಲಿಯ ಅಗ್ನಿಶಾಮಕ ಠಾಣೆಯಲ್ಲಿ ಕಾನ್‌ಸ್ಟೆಬಲ್‌ ಆಗಿ ಸೇವೆ ಸಲ್ಲಿಸುತ್ತಿರುವ ರಾಜೇಶ ಮಡಿವಾಳ ಅವರಿಗೆ ಅತ್ಯುತ್ತಮ ಸೇವೆಗಾಗಿ 2016ನೇ ಸಾಲಿನ ಮುಖ್ಯಮಂತ್ರಿ ಚಿನ್ನದ ಪದಕ ಲಭಿಸಿದೆ.

ತಾಲ್ಲೂಕಿನ ಊರಕೇರಿ ಗ್ರಾಮದವರಾದ ರಾಜೇಶ ಮಡಿವಾಳ ಅವರು ಡಾ. ಎ.ವಿ. ಬಾಳಿಗಾ ಕಲಾ–ವಿಜ್ಞಾನ ಮಹಾವಿದ್ಯಾಲಯದಲ್ಲಿ ಬಿ.ಎ. ಪದವಿ ಮುಗಿಸಿದ್ದು, ಕಳೆದ ಹನ್ನೆರಡು ವರ್ಷಗಳಿಂದ ಅಗ್ನಿಶಾಮಕ ದಳದಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.

ವೃತ್ತಿಯೊಂದಿಗೆ ದೇಹದಾರ್ಢ್ಯ ಹಾಗೂ ಭಾರ ಎತ್ತುವ ಸ್ಪರ್ಧೆಯಲ್ಲಿ ತೊಡಗಿಸಿಕೊಂಡಿರುವ ಅವರು 2009, 2011, 2014 ಹಾಗೂ 2015, 2016 ಹಾಗೂ 2018 ರಲ್ಲಿ ನಡೆದ ಸರ್ಕಾರಿ ನೌಕರರ ರಾಜ್ಯ ಮಟ್ಟದ ದೇಹದಾರ್ಢ್ಯ ಸ್ಪರ್ಧೆಯ 80 ಕೆ.ಜಿ. ವಿಭಾಗದಲ್ಲಿ ಚಿನ್ನದ ಪದಕ ಹಾಗೂ 2016 ರಲ್ಲಿ ನಡೆದ ರಾಷ್ಟ್ರ ಮಟ್ಟದ ಸ್ಪರ್ಧೆಯಲ್ಲಿ ಬೆಳ್ಳಿ ಪದಕ ಪಡೆದು ಗಮನಾರ್ಹ ಸಾಧನೆ ಮಾಡಿದ್ದಾರೆ.

2015 ರಲ್ಲಿ ‘ಐರನ್ ಮ್ಯಾನ್ ಆಫ್ ಕರಾವಳಿ’ ಬಹುಮಾನ ಗಳಿಸಿದ್ದಾರೆ. ಮುಕ್ತ ದೇಹ ದಾರ್ಢ್ಯ ಹಾಗೂ ಭಾರ ಎತ್ತುವ ಸ್ಪರ್ಧೆಯಲ್ಲೂ ಹಲವು ಸಲ ಚಾಂಪಿಯನ್ ಪಟ್ಟಕ್ಕೇರಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT