ರಾಜಸ್ಥಾನ ಸ್ಥಳೀಯ ಸಂಸ್ಥೆ ಉಪಚುನಾವಣೆ: ಕಾಂಗ್ರೆಸ್ ಮೇಲುಗೈ

7

ರಾಜಸ್ಥಾನ ಸ್ಥಳೀಯ ಸಂಸ್ಥೆ ಉಪಚುನಾವಣೆ: ಕಾಂಗ್ರೆಸ್ ಮೇಲುಗೈ

Published:
Updated:

ಜೈಪುರ: ರಾಜಸ್ಥಾನದ ವಿವಿಧ ಸ್ಥಳೀಯ ಸಂಸ್ಥೆಗಳ 32 ಸ್ಥಾನಗಳಿಗೆ ನಡೆದ ಉಪಚುನಾವಣೆಯಲ್ಲಿ 20 ಸ್ಥಾನಗಳಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿದೆ.

ರಾಜ್ಯದ ವಿವಿಧ ನಗರಪಾಲಿಕೆಗಳ ಆರು ಸ್ಥಾನಗಳಲ್ಲಿ ಕಾಂಗ್ರೆಸ್ ನಾಲ್ಕನ್ನು ಗೆದ್ದುಕೊಂಡಿದ್ದರೆ, ಬಿಜೆಪಿ ಎರಡು ಸ್ಥಾನಗಳಲ್ಲಿ ಗೆಲುವು ದಾಖಲಿಸಿದೆ. ವಿವಿಧ ಜಿಲ್ಲಾ ಪಂಚಾಯಿತಿಗಳ ಆರು ಸ್ಥಾನಗಳಲ್ಲಿ ನಾಲ್ಕು ಕಾಂಗ್ರೆಸ್ ಪಾಲಾಗಿದ್ದರೆ, ಬಿಜೆಪಿ ಒಂದು ಮತ್ತು ಪಕ್ಷೇತರರೊಬ್ಬರು ಮತ್ತೊಂದು ಸ್ಥಾನ ಗೆದ್ದುಕೊಂಡಿದ್ದಾರೆ.

20 ತಾಲ್ಲೂಕು ಪಂಚಾಯಿತಿ ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ 12ರಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿದ್ದರೆ, 8 ಸ್ಥಾನಗಳು ಬಿಜೆಪಿ ಪಾಲಾಗಿವೆ.

ಈಚೆಗೆ ರಾಜ್ಯದ ಕೆಲವು ಲೋಕಸಭಾ ಮತ್ತು ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಉಪಚುನಾವಣೆಯಲ್ಲೂ ಕಾಂಗ್ರೆಸ್ ಭಾರಿ ಅಂತರದ ಗೆಲುವು ಸಾಧಿಸಿತ್ತು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry