ರಾಜ್ಯಸಭೆ ಚುನಾವಣೆ ಬಿಜೆಪಿ ಮೊದಲ ಪಟ್ಟಿ

7

ರಾಜ್ಯಸಭೆ ಚುನಾವಣೆ ಬಿಜೆಪಿ ಮೊದಲ ಪಟ್ಟಿ

Published:
Updated:
ರಾಜ್ಯಸಭೆ ಚುನಾವಣೆ ಬಿಜೆಪಿ ಮೊದಲ ಪಟ್ಟಿ

ನವದೆಹಲಿ: ರಾಜ್ಯಸಭೆ ಚುನಾವಣೆಗೆ ಸ್ಪರ್ಧಿಸಲಿರುವ ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಜೆಪಿ ಬುಧವಾರ ಬಿಡುಗಡೆ ಮಾಡಿದೆ.

ಕೇಂದ್ರದ ಎಂಟು ಜನ ಸಚಿವರನ್ನು ರಾಜ್ಯಸಭೆಗೆ ಆಯ್ಕೆ ಮಾಡುವ ನಿಟ್ಟಿನಲ್ಲಿ ವಿವಿಧ ರಾಜ್ಯಗಳಿಂದ ಕಣಕ್ಕಿಳಿಸಲು ನಿರ್ಧರಿಸಲಾಗಿದ್ದು, ಹಣಕಾಸು ಸಚಿವ ಅರುಣ್‌ ಜೇಟ್ಲಿ ಉತ್ತರ ಪ್ರದೇಶದಿಂದ, ಸಚಿವರಾದ ಧರ್ಮೇಂದ್ರ ಪ್ರಧಾನ್‌ ಹಾಗೂ ತಾವರ್‌ಚಂದ್‌ ಗೆಹ್ಲೋಟ್‌ ಮಧ್ಯಪ್ರದೇಶದಿಂದ ಸ್ಪರ್ಧಿಸಲಿದ್ದಾರೆ.

ಗುಜರಾತ್‌ನಿಂದ ಮನಸುಖ್‌ ಮಾಂಡವಿಯಾ, ಪುರುಷೋತ್ತಮ ರೂಪಲಾ, ಹಿಮಾಚಲ ಪ್ರದೇಶದಿಂದ ಜೆ.ಪಿ.ನಡ್ಡಾ, ಬಿಹಾರದಿಂದ ರವಿಶಂಕರ ಪ್ರಸಾದ್‌, ರಾಜಸ್ಥಾನದಿಂದ ಭೂಪಿಂದರ್‌ ಯಾದವ್‌ ಅವರು ಸ್ಪರ್ಧಿಸಲಿದ್ದಾರೆ ಎಂದು ಬಿಜೆಪಿಯ ಕೇಂದ್ರ ಚುನಾವಣಾ ಸಮಿತಿಯ ಪ್ರಕಟಣೆ ತಿಳಿಸಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry