ಚಿಕಿತ್ಸೆಗಾಗಿ ಅಮೆರಿಕಕ್ಕೆ ತೆರಳಿದ ಮನೋಹರ್ ಪರ‍್ರೀಕರ್‌

ಬುಧವಾರ, ಮಾರ್ಚ್ 20, 2019
26 °C

ಚಿಕಿತ್ಸೆಗಾಗಿ ಅಮೆರಿಕಕ್ಕೆ ತೆರಳಿದ ಮನೋಹರ್ ಪರ‍್ರೀಕರ್‌

Published:
Updated:
ಚಿಕಿತ್ಸೆಗಾಗಿ ಅಮೆರಿಕಕ್ಕೆ ತೆರಳಿದ ಮನೋಹರ್ ಪರ‍್ರೀಕರ್‌

ಪಣಜಿ/ಮುಂಬೈ: ಅನಾರೋಗ್ಯದಿಂದ ಬಳಲುತ್ತಿರುವ ಗೋವಾ ಮುಖ್ಯಮಂತ್ರಿ ಮನೋಹರ್ ಪರ‍್ರೀಕರ್‌, ಹೆಚ್ಚಿನ ಚಿಕಿತ್ಸೆ ಪಡೆಯಲು ಬುಧವಾರ ಬೆಳಗಿನ ಜಾವ ಅಮೆರಿಕಕ್ಕೆ ತೆರಳಿದ್ದಾರೆ.

‘ಪರ‍್ರೀಕರ್‌ ಜತೆ ಅವರ ಮಗ ಉತ್ಪಲ್‌ ಮತ್ತು ಒಬ್ಬ ವೈದ್ಯರು ಹೋಗಿದ್ದಾರೆ’ ಎಂದು ಮುಖ್ಯಮಂತ್ರಿ ಕಚೇರಿಯ ಅಧಿ

ಕಾರಿಯೊಬ್ಬರು ತಿಳಿಸಿದ್ದಾರೆ.

‘ನನ್ನ ಅನುಪಸ್ಥಿತಿಯಲ್ಲಿ ಕಾರ್ಯನಿರ್ವಹಿಸಲು ಸಚಿವ ಸಂಪುಟ ಸಲಹಾ ಸಮಿತಿ ರಚಿಸಲಾಗಿದೆ. ಸಂಪುಟ ಸಭೆ ನಡೆದಾಗ ವಿಡಿಯೊ ಕಾನ್ಫರೆನ್ಸ್‌ ಮೂಲಕ ಭಾಗವಹಿಸುತ್ತೇನೆ. ಅದು ಸಾಧ್ಯವಾಗದಿದ್ದರೆ, ಸಭೆಯ ಅಧ್ಯಕ್ಷತೆಯನ್ನು ಯಾರು ವಹಿಸಬೇಕು ಎಂದು ಮುಖ್ಯ ಕಾರ್ಯದರ್ಶಿಗೆ ಸೂಚಿಸಿದ್ದೇನೆ’ ಎಂದು ರಾಜ್ಯಪಾಲರಿಗೆ ಬರೆದಿರುವ ಪತ್ರದಲ್ಲಿ ತಿಳಿಸಿದ್ದಾರೆ.

ಫೆಬ್ರುವರಿ 15ರಂದು ಮುಂಬೈನ ಲೀಲಾವತಿ ಆಸ್ಪತ್ರೆಗೆ ದಾಖಲಾಗಿದ್ದ ಪರ‍್ರೀಕರ್‌, ಮೇದೋಜೀರಕ ಉರಿಯೂತಕ್ಕೆ ಚಿಕಿತ್ಸೆ ಪಡೆದು, 22ರಂದು ಬಿಡುಗಡೆಯಾಗಿದ್ದರು. ಫೆಬ್ರುವರಿ 25ರಂದು ಗೋವಾ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಾಗಿದ್ದ ಅವರು, ಹೊಟ್ಟೆನೋವಿಗೆ ಚಿಕಿತ್ಸೆ ಪಡೆದಿದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry