ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸ್ಯಾನಿಟರಿ ನ್ಯಾಪ್‌ಕಿನ್‌ ಸ್ವಯಂಚಾಲಿತ ಯಂತ್ರ ಅಳವಡಿಕೆ

Last Updated 7 ಮಾರ್ಚ್ 2018, 19:30 IST
ಅಕ್ಷರ ಗಾತ್ರ

ಭುವನೇಶ್ವರ: ಪೂರ್ವ ಕರಾವಳಿಯ ಮಹಿಳಾ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಇಲ್ಲಿನ ರೈಲ್ವೆ ನಿಲ್ದಾಣದಲ್ಲಿ ‘ಹ್ಯಾಪಿ ನಾರಿ’ ಹೆಸರಿನ ಸ್ಯಾನಿಟರಿ ನ್ಯಾಪ್‌ಕಿನ್‌ ವಿತರಣಾ ಯಂತ್ರ ಅಳವಡಿಸಲಾಗಿದೆ ಎಂದು ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ.

‘ಯಂತ್ರದಲ್ಲಿ ₹5 ಹಾಕಿ, ಯಾರು ಬೇಕಾದರೂ ನ್ಯಾಪ್‌ಕಿನ್‌ ಪಡೆಯಬಹುದು. ಒಂದು ಬಾರಿಗೆ 75 ನ್ಯಾಪ್‌ಕಿನ್‌ಗಳನ್ನು ಯಂತ್ರಕ್ಕೆ ತುಂಬಿಸಬಹುದು. ಖಾಲಿಯಾದ ನಂತರ ಕಾರ್ಯಕರ್ತರು ಅದನ್ನು ಭರ್ತಿ ಮಾಡುತ್ತಾರೆ’ ಎಂದು ಸಂಘದ ಅಧ್ಯಕ್ಷೆ ಮಧುಲಿಕ ಸಿಂಗ್‌ ಮಾಹಿತಿ ನೀಡಿದರು.

ಮಹಿಳಾ ಪ್ರಯಾಣಿಕರ ಅನುಕೂಲಕ್ಕಾಗಿ ಈ ಕ್ರಮ ಕೈಗೊಳ್ಳಲಾಗಿದೆ. ಒಡಿಶಾ ರಾಜ್ಯದಲ್ಲಿ ಇದು ಮೊದಲ ಪ್ರಯತ್ನ ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT