ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆರು ಮಂದಿಗೆ ಬ್ಯಾರಿ ಅಕಾಡೆಮಿ ಪ್ರಶಸ್ತಿ

Last Updated 7 ಮಾರ್ಚ್ 2018, 19:39 IST
ಅಕ್ಷರ ಗಾತ್ರ

ಮಂಗಳೂರು: ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯ 2016 ಮತ್ತು 2017 ನೇ ಸಾಲಿನ ಗೌರವ ಪ್ರಶಸ್ತಿಗಳನ್ನು ಪ್ರಕಟಿಸಲಾಗಿದೆ.

2016 ನೇ ಸಾಲಿನ ಗೌರವ ಪ್ರಶಸ್ತಿಗೆ ಸಾಹಿತ್ಯ, ಸಂಶೋಧನೆ ವಿಭಾಗದಲ್ಲಿ ಹಿರಿಯ ಸಾಹಿತಿ ಫಕೀರ್‌ ಮೊಹಮ್ಮದ್‌ ಕಟಪಾಡಿ, ಜಾನಪದ ಕ್ಷೇತ್ರದಲ್ಲಿ ಮಹಮ್ಮದ್‌ ಮಣ್ಣಗುಂಡಿ ಮತ್ತು ಬ್ಯಾರಿ ಕಲೆ ವಿಭಾಗದಲ್ಲಿ ಅಬೂಬಕ್ಕರ ಬಡ್ಡೂರು ಅವರನ್ನು ಆಯ್ಕೆ ಮಾಡಲಾಗಿದೆ.

2017 ನೇ ಸಾಲಿನ ಗೌರವ ಪ್ರಶಸ್ತಿಗೆ ಸಾಹಿತ್ಯ, ಸಂಶೋಧನೆ ವಿಭಾಗದಲ್ಲಿ ಸಾಹಿತಿ ಉಮರ್‌ ಯು.ಎಚ್‌., ಜಾನಪದ ವಿಭಾಗದಲ್ಲಿ ಬಿ.ಎಂ. ಹಸೈನಾರ್ ಮತ್ತು ಕಲಾ ವಿಭಾಗದಲ್ಲಿ ಅಝೀಝ್‌ ಬೈಕಂಪಾಡಿ ಅವರನ್ನು ಆಯ್ಕೆ ಮಾಡಲಾಗಿದೆ.

ಪ್ರಶಸ್ತಿಯು ತಲಾ ₹50 ಸಾವಿರ ನಗದು, ಸ್ಮರಣಿಕೆ ಮತ್ತು ಸನ್ಮಾನ ಪತ್ರಗಳನ್ನು ಒಳಗೊಂಡಿದ್ದು, ಇದೇ 13 ರಂದು ಮೂಡಿಗೆರೆಯ ಎಚ್‌.ಎಸ್‌. ಚಂದ್ರೇಗೌಡ ಬಡಾವಣೆಯ ರೈತ ಭವನದಲ್ಲಿ ನಡೆಯುವ ಸಮಾರಂಭದಲ್ಲಿ ಪ್ರದಾನ ಮಾಡಲಾಗುವುದು ಎಂದು ಅಕಾಡೆಮಿ ಅಧ್ಯಕ್ಷ ಕರಂಬಾರ್‌ ಮಹಮ್ಮದ್‌ ಬುಧವಾರ ಇಲ್ಲಿ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT