ಭದ್ರತೆಯಲ್ಲಿ ಲೋಪವಾದರೆ ಪೊಲೀಸರೇ ಹೊಣೆ

7

ಭದ್ರತೆಯಲ್ಲಿ ಲೋಪವಾದರೆ ಪೊಲೀಸರೇ ಹೊಣೆ

Published:
Updated:

ಬೆಂಗಳೂರು: ಲೋಕಾಯುಕ್ತ ಕಚೇರಿಯಲ್ಲಿ ನಡೆದ ಘಟನೆಯಿಂದ ಎಚ್ಚೆತ್ತ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ, ಭದ್ರತೆಯಲ್ಲಿ ಲೋಪವಾದರೆ ಸಂಬಂಧಪಟ್ಟ ಪೊಲೀಸ್ ಅಧಿಕಾರಿಯನ್ನೇ ಹೊಣೆಯನ್ನಾಗಿ ಮಾಡಲು ತೀರ್ಮಾನಿಸಿದೆ.

ಬುಧವಾರ ಸುತ್ತೋಲೆ ಹೊರಡಿಸಿರುವ ಇಲಾಖೆ, ವಿಧಾನಸೌಧ, ವಿಕಾಸಸೌಧ ಹಾಗೂ ಬಹುಮಹಡಿ ಕಟ್ಟಡಗಳಲ್ಲಿರುವ ಕಚೇರಿಗಳಿಗೆ ಬಿಗಿ ಭದ್ರತೆ ಒದಗಿಸುವಂತೆ ವಿಧಾನಸೌಧ ಭದ್ರತಾ ದಳದ ಪೊಲೀಸರಿಗೆ ಸೂಚನೆ ನೀಡಿದೆ.

‘ಕಚೇರಿಗೆ ಬರುವ ಸಾರ್ವಜನಿಕರನ್ನು ತಪಾಸಣೆಗೆ ಒಳಪಡಿಸಿ, ಬ್ಯಾಗ್‌ಗಳನ್ನು ಪರಿಶೀಲಿಸುತ್ತಿರುವುದು ಸರಿಯಷ್ಟೇ. ಈಗ ಭದ್ರತೆಯನ್ನು ಮತ್ತಷ್ಟು ಬಿಗಿಗೊಳಿಸಬೇಕಿದೆ. ಸಾರ್ವಜನಿಕರ ಭೇಟಿಗಾಗಿ ಅವಧಿ ನಿಗದಿಪಡಿಸಿ, ಆ ಸಂದರ್ಭದಲ್ಲಿ ಹೆಚ್ಚಿನ ಸಿಬ್ಬಂದಿಯನ್ನು ಭದ್ರತೆಗೆ ನಿಯೋಜಿಸಬೇಕು. ಲೋಹ ಶೋಧಕ ಯಂತ್ರದ ಮೂಲಕ ಪ್ರತಿಯೊಬ್ಬರ ತಪಾಸಣೆ ಮಾಡಬೇಕು’ ಎಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry