ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಾಡಧ್ವಜ ವಿನ್ಯಾಸ: ಕನ್ನಡ ಸಂಘಟನೆಗಳು, ಸಾಹಿತಿಗಳು, ಹೋರಾಟಗಾರರ ಒಪ್ಪಿಗೆ

Last Updated 8 ಮಾರ್ಚ್ 2018, 7:02 IST
ಅಕ್ಷರ ಗಾತ್ರ

ಬೆಂಗಳೂರು: ಸರ್ಕಾರ ರಚಿಸಿದ್ದ ತಜ್ಞರ ‌ಸಮಿತಿ ವಿನ್ಯಾಸಗೊಳಿಸಿರುವ ನಾಡಧ್ವಜ ಕುರಿತು ಕನ್ನಡ ಸಂಘಟನೆಗಳ ಮುಖಂಡರ ಜೊತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಗೃಹ ಕಚೇರಿ ಕೃಷ್ಣಾದಲ್ಲಿ ಗುರುವಾರ ಸಭೆ ನಡೆಸಿದರು.

ಸರ್ಕಾರ ರೂಪಿಸಿರುವ ನಾಡಧ್ವಜಕ್ಕೆ ಕನ್ನಡ ಸಂಘಟನೆಗಳು, ಸಾಹಿತಿಗಳು, ಹೋರಾಟಗಾರರ ಸಮ್ಮತಿ ಸೂಚಿಸಿದರು.

ಹಳದಿ, ಬಿಳಿ, ಕೆಂಪು ಬಣ್ಣ ಮತ್ತು ಸರ್ಕಾರದ ಲಾಂಛನ ಒಳಗೊಂಡ ಬಾವುಟವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರದರ್ಶಿಸಿದರು. 

* ಶೀಘ್ರವೇ ನಾಡಧ್ವಜದ ವಿನ್ಯಾಸ ಮತ್ತು ವಿವರವನ್ನು ಕೇಂದ್ರ ಸರ್ಕಾರಕ್ಕೆ ಕಳುಹಿಸಿ ಒಪ್ಪಿಗೆ ಪಡೆಯಲಾಗುವುದು. ನಾಡಧ್ವಜ ಹೊಂದಲು ಸಂವಿಧಾನದಲ್ಲಿ ಅವಕಾಶ ಇದೆ.
–ಸಿದ್ದರಾಮಯ್ಯ, ಮುಖ್ಯಮಂತ್ರಿ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT