ಗುರುವಾರ , ಫೆಬ್ರವರಿ 20, 2020
27 °C

ತಮಿಳುನಾಡಿನಲ್ಲಿ ಅಂಬೇಡ್ಕರ್ ಪ್ರತಿಮೆ ವಿರೂಪ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ತಮಿಳುನಾಡಿನಲ್ಲಿ ಅಂಬೇಡ್ಕರ್ ಪ್ರತಿಮೆ ವಿರೂಪ

ಚೆನ್ನೈ: ಇಲ್ಲಿನ ತಿರುವೊಟ್ಟಿಯೂರ್ ಎಂಬಲ್ಲಿ ಸಂವಿಧಾನ ಶಿಲ್ಪಿ ಬಿ. ಆರ್ ಅಂಬೇಡ್ಕರ್ ಅವರ ಪ್ರತಿಮೆಯನ್ನು ದುಷ್ಕರ್ಮಿಗಳು ವಿರೂಪಗೊಳಿಸಿದ್ದಾರೆ.
ಪೊಲೀಸರ ಪ್ರಕಾರ ಗುರುವಾರ ಬೆಳಿಗ್ಗೆ 7 ಗಂಟೆಗೆ ತಿರುವಟ್ಟಿಯೂರ್ ಮಾರುಕಟ್ಟೆಯ ಬಳಿ ಇರುವ ಗ್ರಾಮ ರಸ್ತೆಯಲ್ಲಿದ್ದ ಅಂಬೇಡ್ಕರ್ ಪ್ರತಿಮೆಗೆ ದುಷ್ಕರ್ಮಿಗಳು ಕೆಂಪು ಪೇಂಟ್ ಬಳಿದಿದ್ದಾರೆ. ವಿಷಯ ತಿಳಿದು  ಪೊಲೀಸರು ಆಗಮಿಸುವ ಮುನ್ನವೇ ದುಷ್ಕರ್ಮಿಗಳು ಅಲ್ಲಿಂದ ಪಲಾಯನ ಮಾಡಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳು ಹೇಳಿರುವುದಾಗಿ ದ ನ್ಯೂಸ್ ಮಿನಿಟ್ ಸುದ್ದಿತಾಣ ವರದಿ ಮಾಡಿದೆ.

ತಿರುವೊಟ್ಟಿಯೂರ್ ಪೊಲೀಸರು ಪ್ರಕರಣ ದಾಖಲಿಸಿದ್ದು, ತನಿಖೆ ಮುಂದುವರಿದಿದೆ.

ಎರಡು ದಿನಗಳ ಹಿಂದೆಯಷ್ಟೇ ವೆಲ್ಲೂರಿನಲ್ಲಿ ಸಮಾಜ ಸುಧಾರಕ ಪೆರಿಯಾರ್ ಅವರ ಪ್ರತಿಮೆಯನ್ನು ಧ್ವಂಸಗೊಳಿಸಲಾಗಿತ್ತು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)