2ನೇ ಸುತ್ತಿನ ಪಲ್ಸ್ ಪೋಲಿಯೊ 11ರಿಂದ

7

2ನೇ ಸುತ್ತಿನ ಪಲ್ಸ್ ಪೋಲಿಯೊ 11ರಿಂದ

Published:
Updated:

ಚಿತ್ರದುರ್ಗ: ಇದೇ 11ರಿಂದ 14ರವರೆಗೆ ನಡೆಯುವ ಎರಡನೇ ಸುತ್ತಿನ ಪಲ್ಸ್ ಪೋಲಿಯೊ ಕಾರ್ಯಕ್ರಮವನ್ನು 11ರಂದು ಬೆಳಿಗ್ಗೆ 9ಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಆಂಜನೇಯ ಉದ್ಘಾಟಿಸುತ್ತಾರೆ.

ಜಿಲ್ಲಾ ಆಸ್ಪತ್ರೆ ಆವರಣದಲ್ಲಿ ನಡೆಯುವ ಈ ಸಮಾರಂಭದಲ್ಲಿ ಶಾಸಕ ಜಿ.ಎಚ್.ತಿಪ್ಪಾರಡ್ಡಿ ಅಧ್ಯಕ್ಷತೆ ವಹಿಸುವರು.

ಜಿಲ್ಲಾ ಪಂಚಾಯ್ತಿ ಅಧ್ಯಕ್ಷೆ ಸೌಭಾಗ್ಯ ಬಸವರಾಜನ್, ಸಂಸದ ಬಿ.ಎನ್‌.ಚಂದ್ರಪ್ಪ ಒಳಗೊಂಡಂತೆ ಜಿಲ್ಲೆಯ ಎಲ್ಲಾ ಶಾಸಕರು ಭಾಗವಹಿಸುವರು.

9 ರಂದು ಜಾಗೃತಿ ಜಾಥಾ: ಪೋಲಿಯೊ ಅಭಿಯಾನದ ಪೂರ್ವಭಾವಿಯಾಗಿ 9ರಂದು ಬೆಳಿಗ್ಗೆ 9.30ಕ್ಕೆ ಜಿಲ್ಲಾ ಆಸ್ಪತ್ರೆ ಆವರಣದಲ್ಲಿ ಜಾಗೃತಿ ಜಾಥಾ ಆಯೋಜಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ. 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry