ಮೊದಲು ಬ್ಯಾಟಿಂಗ್‌ ಮಾಡಿದ ಬಾಂಗ್ಲಾ: ಭಾರತಕ್ಕೆ 140 ರನ್‌ ಗುರಿ

7

ಮೊದಲು ಬ್ಯಾಟಿಂಗ್‌ ಮಾಡಿದ ಬಾಂಗ್ಲಾ: ಭಾರತಕ್ಕೆ 140 ರನ್‌ ಗುರಿ

Published:
Updated:
ಮೊದಲು ಬ್ಯಾಟಿಂಗ್‌ ಮಾಡಿದ ಬಾಂಗ್ಲಾ: ಭಾರತಕ್ಕೆ 140 ರನ್‌ ಗುರಿ

ಕೊಲಂಬೊ: ಮೊದಲ ಪಂದ್ಯದಲ್ಲೇ ಆಘಾತ ಅನುಭವಿಸಿರುವ ಭಾರತ ತಂಡ ನಿದಾಸ್ ಕಪ್ ಟ್ವೆಂಟಿ–20 ತ್ರಿಕೋನ ಕ್ರಿಕೆಟ್ ಸರಣಿಯಲ್ಲಿ ಗುರುವಾರ ಬಾಂಗ್ಲಾದೇಶದ ವಿರುದ್ಧ ಸೆಣಸಾಡುತ್ತಿದೆ.

ಬಾಂಗ್ಲಾದೇಶದ ವಿರುದ್ಧ ಟಾಸ್‌ ಗೆದ್ದ ಭಾರತ ಬೌಲಿಂಗ್‌ ಆಯ್ಕೆ ಮಾಡಿಕೊಂಡಿತು. ಮೊದಲು ಬ್ಯಾಟಿಂಗ್‌ ಮಾಡಿದ ಬಾಂಗ್ಲಾ 20 ಓವರ್‌ಗಳಲ್ಲಿ 8 ವಿಕೆಟ್‌ ಕಳೆದುಕೊಂಡು 139 ರನ್‌ ಗಳಿಸಿದೆ.

ಭಾರತದ ಪರ: ಜಯದೇವ ಉನದ್ಕತ್‌ 3, ವಿಜಯ್‌ ಶಂಕರ್ 2 ಶಾರ್ದೂಲ್ ಠಾಕೂರ್‌ 1, ಚಾಹಲ್‌ 1 ವಿಕೆಟ್‌ ಪಡೆದರು.

ಮಂಗಳವಾರ ನಡೆದ ಉದ್ಘಾಟನಾ ಪಂದ್ಯದಲ್ಲಿ ಆತಿಥೇಯ ಶ್ರೀಲಂಕಾ ಎದುರು ಭಾರತ ಐದು ವಿಕೆಟ್‌ಗಳಿಂದ ಸೋತಿತ್ತು. 

ಅನಿರೀಕ್ಷಿತ ಆಘಾತ ನೀಡಬಲ್ಲ ಬಾಂಗ್ಲಾದೇಶ ತಂಡವನ್ನು ಸುಲಭವಾಗಿ ಪರಿಗಣಿಸಲು ಸಾಧ್ಯವಿಲ್ಲದ ಕಾರಣ ಈ ‍ಪಂದ್ಯ ಭಾರತ ತಂಡಕ್ಕೆ ಅಗ್ನಿ ಪರೀಕ್ಷೆ ಆಗಲಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry