ಲೋಕಾಯುಕ್ತರ ಮೇಲಿನ ಹಲ್ಲೆ ಪ್ರಕರಣ: ಡಿಸಿಪಿ ಯೋಗೇಶ್ ಅಮಾನತು

ಬುಧವಾರ, ಮಾರ್ಚ್ 27, 2019
22 °C

ಲೋಕಾಯುಕ್ತರ ಮೇಲಿನ ಹಲ್ಲೆ ಪ್ರಕರಣ: ಡಿಸಿಪಿ ಯೋಗೇಶ್ ಅಮಾನತು

Published:
Updated:
ಲೋಕಾಯುಕ್ತರ ಮೇಲಿನ ಹಲ್ಲೆ ಪ್ರಕರಣ: ಡಿಸಿಪಿ ಯೋಗೇಶ್ ಅಮಾನತು

ಬೆಂಗಳೂರು: ಲೋಕಾಯುಕ್ತ ನ್ಯಾಯಮೂರ್ತಿ ಪಿ. ವಿಶ್ವನಾಥ್‌ಶೆಟ್ಟಿಗೆ ಚಾಕು ಇರಿತ ಪ್ರಕರಣದಲ್ಲಿ ವಿಧಾನಸೌಧ ಭದ್ರತಾ ವಿಭಾಗದ ಡಿಸಿಪಿ ಯೋಗೇಶ್ ಅವರನ್ನು ಅಮಾನತು ಮಾಡಲಾಗಿದೆ.

ಲೋಕಾಯುಕ್ತ ಕಚೇರಿಯ ಭದ್ರತಾ ವೈಫಲ್ಯದಿಂದಲೇ ವಿಶ್ವನಾಥ್ ಶೆಟ್ಟಿ ಅವರ ಹತ್ಯೆಗೆ ಯತ್ನ ನಡೆದಿದೆ ಎಂದು ‌ಬೆಂಗಳೂರು ಪೊಲೀಸ್ ಕಮಿಷನರ್ ಟಿ. ಸುನೀಲ್‌ಕುಮಾರ್ ಗೃಹ ಇಲಾಖೆಗೆ ಗುರುವಾರ ವರದಿ ಕೊಟ್ಟಿದ್ದರು. ಅದನ್ನು ಆಧರಿಸಿ ಡಿಸಿಪಿ ಯೋಗೇಶ್ ಅಮಾನತಿಗೆ ಗೃಹ ಸಚಿವ ರಾಮಲಿಂಗಾರೆಡ್ಡಿ ಆದೇಶಿಸಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry