ಶಿಖರ್‌ ಧವನ್‌ ಅರ್ಧಶತಕ: ಬಾಂಗ್ಲಾ ವಿರುದ್ಧ ಭಾರತಕ್ಕೆ ಆರು ವಿಕೆಟ್‌ ಜಯ

ಗುರುವಾರ , ಮಾರ್ಚ್ 21, 2019
32 °C

ಶಿಖರ್‌ ಧವನ್‌ ಅರ್ಧಶತಕ: ಬಾಂಗ್ಲಾ ವಿರುದ್ಧ ಭಾರತಕ್ಕೆ ಆರು ವಿಕೆಟ್‌ ಜಯ

Published:
Updated:
ಶಿಖರ್‌ ಧವನ್‌ ಅರ್ಧಶತಕ: ಬಾಂಗ್ಲಾ ವಿರುದ್ಧ ಭಾರತಕ್ಕೆ ಆರು ವಿಕೆಟ್‌ ಜಯ

ಕೊಲಂಬೊ: ಮೊದಲ ಪಂದ್ಯದಲ್ಲೇ ಆಘಾತ ಅನುಭವಿಸಿದ್ದ ಭಾರತ ತಂಡ ನಿದಾಸ್ ಕಪ್ ಟ್ವೆಂಟಿ–20 ತ್ರಿಕೋನ ಕ್ರಿಕೆಟ್ ಸರಣಿಯಲ್ಲಿ ಗುರುವಾರ  ಬಾಂಗ್ಲಾದೇಶದ ವಿರುದ್ಧ ನಡೆದ ಎರಡನೇ ಟ್ವಿಂಟಿ–20 ಕ್ರಿಕೆಟ್‌ ಪಂದ್ಯದಲ್ಲಿ ಆರು ವಿಕೆಟ್‌ ಜಯ ಸಾಧಿಸಿದೆ.

ಬಾಂಗ್ಲಾದೇಶದ ವಿರುದ್ಧ ಟಾಸ್‌ ಗೆದ್ದ ಭಾರತ ಬೌಲಿಂಗ್‌ ಆಯ್ಕೆ ಮಾಡಿಕೊಂಡಿತು. ಮೊದಲು ಬ್ಯಾಟಿಂಗ್‌ ಮಾಡಿದ ಬಾಂಗ್ಲಾ 20 ಓವರ್‌ಗಳಲ್ಲಿ 8 ವಿಕೆಟ್‌ ಕಳೆದುಕೊಂಡು 139 ರನ್‌ ಗಳಿಸಿತ್ತು. ಸಾಧಾರಣ ಗುರಿ ಬೆನ್ನತ್ತಿದ ಭಾರತ 18.4 ಓವರ್‌ಗಳಲ್ಲಿ 4 ವಿಕೆಟ್‌ ಕಳೆದುಕೊಂಡು ಗೆಲುವಿನ ನಗೆ ಬೀರಿತು.

ಮಂಗಳವಾರ ನಡೆದ ಉದ್ಘಾಟನಾ ಪಂದ್ಯದಲ್ಲಿ ಆತಿಥೇಯ ಶ್ರೀಲಂಕಾ ಎದುರು ಭಾರತ ಐದು ವಿಕೆಟ್‌ಗಳಿಂದ ಸೋತಿತ್ತು. ಈ ಪಂದ್ಯದಲ್ಲಿ 90 ರನ್‌ ಸಿಡಿಸಿದ್ದ ಶಿಖರ್‌ ಧವನ್‌ ಇಂದು ಬಾಂಗ್ಲಾ ವಿರುದ್ಧ ನಡೆದ ಪಂದ್ಯದಲ್ಲೂ ಅರ್ಧಶತಕ ಸಿಡಿಸಿ ಮಿಂಚಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry