‘ಸಿದ್ಧಗಂಗಾಶ್ರೀ ನಿಲುವಿಗೆ ಬೆಂಬಲ’

7

‘ಸಿದ್ಧಗಂಗಾಶ್ರೀ ನಿಲುವಿಗೆ ಬೆಂಬಲ’

Published:
Updated:

ನವದೆಹಲಿ: ‘ಲಿಂಗಾಯತ ಸಮುದಾಯಕ್ಕೆ ಪ್ರತ್ಯೇಕ ಧರ್ಮದ ಸ್ಥಾನಮಾನ ನೀಡಲು ರಾಜ್ಯ ಸರ್ಕಾರ ತಜ್ಞರ ಸಮಿತಿಯ ವರದಿ ಆಧರಿಸಿ ಕೇಂದ್ರಕ್ಕೆ ಶಿಫಾರಸು ಮಾಡಿದರೂ, ನಾವು ವೀರಶೈವ ಮಹಾಸಭಾ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ಹಾಗೂ ಸಿದ್ಧಗಂಗಾ ಮಠದ ಶಿವಕುಮಾರ ಸ್ವಾಮೀಜಿಯವರ ನಿಲುವಿಗೆ ಬೆಂಬಲ ನೀಡುತ್ತೇವೆ’ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್‌. ಯಡಿಯೂರಪ್ಪ ತಿಳಿಸಿದರು.

ಗುರುವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ‘ವೀರಶೈವ– ಲಿಂಗಾಯತ ಎಂಬ ಹೆಸರಿನಡಿಯೇ ಪ್ರತ್ಯೇಕ ಧರ್ಮದ ಸ್ಥಾನಮಾನ ದೊರೆ

ಯಲಿ’ ಎಂಬ ಶಾಮನೂರು ಶಿವಶಂಕರಪ್ಪ ಅವರ ನಿಲುವನ್ನೇ ಲಿಂಗಾಯತರು ಬೆಂಬಲಿಸಿದ್ದಾರೆ ಎಂದರು.

‘ನಾನು ಇತ್ತೀಚೆಗೆ ರಾಜ್ಯದ 224 ವಿಧಾನಸಭೆ ಕ್ಷೇತ್ರಗಳಲ್ಲಿ ಪ್ರವಾಸ ಮಾಡಿದ್ದೇನೆ. ಅಲ್ಲಿನ ಲಿಂಗಾಯತರೆಲ್ಲರೂ ವೀರಶೈವ ಎಂಬ ಪದ ಬೇಡ ಎಂದು ತಿಳಿಸಿಲ್ಲ’ ಎಂದು ಅವರು ಹೇಳಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry