ರಾಜಶ್ರೀ ಜೈನಾಪುರೆ ಪತಿ ಮನೆ ಮೇಲೆ ಭ್ರಷ್ಟಾಚಾರ ನಿಗ್ರಹ ದಳ ದಾಳಿ

7

ರಾಜಶ್ರೀ ಜೈನಾಪುರೆ ಪತಿ ಮನೆ ಮೇಲೆ ಭ್ರಷ್ಟಾಚಾರ ನಿಗ್ರಹ ದಳ ದಾಳಿ

Published:
Updated:
ರಾಜಶ್ರೀ ಜೈನಾಪುರೆ ಪತಿ ಮನೆ ಮೇಲೆ ಭ್ರಷ್ಟಾಚಾರ ನಿಗ್ರಹ ದಳ ದಾಳಿ

ಬೆಳಗಾವಿ: ಅಥಣಿಯ ಕೃಷ್ಣಾ ಮೇಲ್ದಂಡೆ ಯೋಜನೆಯ ವಿಶೇಷ ಭೂಸ್ವಾಧೀನಾಧಿಕಾರಿ ರಾಜಶ್ರೀ ಜೈನಾಪುರೆ ಅವರ ಪತಿಯ ಮನೆ ಮೇಲೆ  ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳು ಶುಕ್ರವಾರ  ಬೆಳಿಗ್ಗೆ ದಾಳಿ ನಡೆಸಿದ್ದಾರೆ. 

ಅಕ್ರಮ ಆಸ್ತಿ ಸಂಪಾದನೆ ಆರೋಪ ಕೇಳಿಬಂದಿದ್ದರಿಂದ ಹುಬ್ಬಳ್ಳಿಯ ‌ಕೇಶ್ವಾಪುರದಲ್ಲಿರುವ ಜೈನಾಪುರೆ ಪತಿ ನಿವಾಸದ ಮೇಲೆ ದಾಳಿ ನಡೆಸಲಾಗಿದೆ. ಅಧಿಕಾರಿಗಳು ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ.

ರಾಜಶ್ರೀ ಬೆಳಗಾವಿ ಉಪ ವಿಭಾಗಾಧಿಕಾರಿ ಆಗಿ ಕಾರ್ಯ ನಿರ್ವಹಿಸಿದ್ದರು.

ಎಇಇ ಮನೆ ಹಾಗೂ ಕಚೇರಿ ಮೇಲೆ ಎಸಿಬಿ ದಾಳಿ

ಕೊಪ್ಪಳ: ಜಿಲ್ಲೆಯ ಗಂಗಾವತಿಯ ಜಯನಗರದಲ್ಲಿ ಜಿಲ್ಲಾ ಪಂಚಾಯಿತಿಯ ಎಇಇ ಮನೆ ಹಾಗೂ ಕಚೇರಿ ಮೇಲೆ ಎಸಿಬಿ ದಾಳಿ ನಡೆದಿದೆ.

ಉಡುಪಿ ಅಬಕಾರಿ ಉಪ ಅಧೀಕ್ಷಕರ ಮನೆ ಮೇಲೆ ಭ್ರಷ್ಟಾಚಾರ ನಿಗ್ರಹ ದಳ ದಾಳಿ

ಉಡುಪಿ: ಉಡುಪಿ ಅಬಕಾರಿ ಉಪ ಅಧೀಕ್ಷಕ ವಿನೋದ್ ಕುಮಾರ್ ಅವರ ಮಂಗಳೂರಿನ ನಿವಾಸದ ಮೇಲೆ ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಮನೆಯೂ ಸೇರಿದಂತೆ ಒಟ್ಟು ಆರು ಕಡೆ ದಾಳಿ ನಡೆದಿದೆ. ಅಕ್ರಮ ಆಸ್ತಿ ಗಳಿಕೆ ದೂರಿನ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಎಸಿಬಿ ಎಸ್ಪಿ ಅವರ ನೇತೃತ್ವದಲ್ಲಿ  ದಾಳಿ ನಡೆದಿದೆ ಎಂದು ತಿಳಿದು ಬಂದಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry