‘ನ್ಯಾಯಮೂರ್ತಿಗಳ ನಿವೃತ್ತಿ ವಯಸ್ಸು ಹೆಚ್ಚಳ ಇಲ್ಲ’

7

‘ನ್ಯಾಯಮೂರ್ತಿಗಳ ನಿವೃತ್ತಿ ವಯಸ್ಸು ಹೆಚ್ಚಳ ಇಲ್ಲ’

Published:
Updated:

ನವದೆಹಲಿ: ಹೈಕೋರ್ಟ್‌ ನ್ಯಾಯಮೂರ್ತಿಗಳ ನಿವೃತ್ತಿ ವಯೋಮಿತಿಯನ್ನು 62ರಿಂದ 65ಕ್ಕೆ ಹೆಚ್ಚಿಸುವ ಯಾವುದೇ ಪ್ರಸ್ತಾವ ಇಲ್ಲ ಎಂದು ಕೇಂದ್ರದ ಕಾನೂನು ಖಾತೆ ರಾಜ್ಯ ಸಚಿವ ಪಿ.ಪಿ.ಚೌಧರಿ ಶುಕ್ರವಾರ ರಾಜ್ಯಸಭೆಗೆ ತಿಳಿಸಿದರು.

ಯುಪಿಎ ಸರ್ಕಾರ 2010ರಲ್ಲಿ ನ್ಯಾಯಮೂರ್ತಿಗಳ ನಿವೃತ್ತಿ ವಯೋಮಿತಿಯನ್ನು 62ರಿಂದ 65ಕ್ಕೆ ಹೆಚ್ಚಿಸಲು ತಿದ್ದುಪಡಿ ಮಸೂದೆ ತಂದಿತ್ತು. ಆದರೆ, ಇದನ್ನು ಪರಿಗಣನೆಗೆ ತೆಗೆದುಕೊಳ್ಳಲು ಮತ್ತು ಅಂಗೀಕಾರ ಮಾಡಲು ಸಾಧ್ಯವಿಲ್ಲ ಎಂದರು.

ಕಾನೂನು ಸಚಿವಾಲಯದ ಮಾಹಿತಿ ಪ್ರಕಾರ, ದೇಶದ 24 ಹೈಕೋರ್ಟ್‌ಗಳಲ್ಲಿ 406 ನ್ಯಾಯಮೂರ್ತಿಗಳ ಹುದ್ದೆಗಳು ಖಾಲಿ ಉಳಿದಿದ್ದು ಸುಮಾರು 3 ಕೋಟಿ ಪ್ರಕರಣಗಳು ಬಾಕಿ ಇವೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry