7

ಸ್ವಂತ ವಾಹನಗಳಿಗೂ ಸ್ಪೀಡ್ ಗವರ್ನರ್

Published:
Updated:

ಬೆಂಗಳೂರು: ಸ್ವಂತಕ್ಕೆ ಬಳಕೆ ವಾಹನಗಳಿಗೂ ಸ್ಪೀಡ್ ಗವರ್ನರ್ ಅಳವಡಿಕೆ ಕಡ್ಡಾಯಗೊಳಿಸುವ ಸಂಬಂಧ ಮೋಟಾರು ವಾಹನ ಕಾಯ್ದೆಗೆ ತಿದ್ದು

ಪಡಿ ತರಲು ಕೇಂದ್ರ ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಲು ದಕ್ಷಿಣ ಭಾರತ ಸಾರಿಗೆ ಪರಿಷತ್‌(ಸಿಟ್ಕೊ) ನಿರ್ಧರಿಸಿದೆ.

ತಮಿಳುನಾಡು, ಕೇರಳ, ಗೋವಾ, ಕರ್ನಾಟಕ ಸಾರಿಗೆ ಸಚಿವರ ನೇತೃತ್ವದಲ್ಲಿ ನಗರದಲ್ಲಿ ಶುಕ್ರವಾರ ನಡೆದ 22ನೇ ಸಭೆಯಲ್ಲಿ ಈ ಸಂಬಂಧ ಚರ್ಚೆ ನಡೆಸಲಾಗಿದೆ ಎಂದು ಸಾರಿಗೆ ಸಚಿವ ಎಚ್.ಎಂ. ರೇವಣ್ಣ ಇಲ್ಲಿ ಮಾಧ್ಯಮಗೋಷ್ಠಿಯಲ್ಲಿ ಹೇಳಿದರು.

ಅಪಘಾತ ಕಡಿಮೆ ಮಾಡಲು ವಾಹನ ತಯಾರಿಕೆ ಸಂದರ್ಭದಲ್ಲೆ ವೇಗ ನಿಯಂತ್ರಕ ಅಳವಡಿಸಲು ಕಾಯ್ದೆಗೆ ತಿದ್ದುಪಡಿ ಅಗತ್ಯವಿದೆ ಎಂಬುದನ್ನು ಪ್ರಸ್ತಾವದಲ್ಲಿ ತಿಳಿಸಲಾಗುವುದು ಎಂದರು.

ಪ್ರವಾಸೋದ್ಯಮಕ್ಕೆ ಪ್ರೋತ್ಸಾಹ ನೀಡುವ ಸಂಬಂಧ ವಾಹನಗಳ ಮೇಲೆ ವಿಧಿಸುವ ತೆರಿಗೆಯಲ್ಲಿ  ಏಕರೂಪತೆ ಕಾಪಾಡಿಕೊಳ್ಳಲು ನಿರ್ಧರಿಸಲಾಗಿದೆ ಎಂದು ಹೇಳಿದರು.

ಪುದುಚೆರಿಯಲ್ಲಿ ತಾತ್ಕಾಲಿಕ ನೋಂದಣಿ ಮಾಡಿಸಿಕೊಂಡು ರಾಜ್ಯಕ್ಕೆ ಪ್ರವೇಶಿಸುವ ವಾಹನಗಳು ತೆರಿಗೆ ವಂಚಿಸುತ್ತಿವೆ. ಇದಕ್ಕೆ ಕಡಿವಾಣ ಹಾಕಲು ಸಭೆ

ಯಲ್ಲಿ ತೀರ್ಮಾನಿಸಲಾಗಿದೆ ಎಂದರು.

ವಯನಾಡು, ಬಂಡೀಪುರ ಮತ್ತು ನಾಗರಹೊಳೆ ಅರಣ್ಯ ಪ್ರದೇಶದಲ್ಲಿ ರಾತ್ರಿ ಸಂಚಾರಕ್ಕೆ ನಿರ್ಬಂಧವಿದೆ. ಮಾತುಕತೆ ಮೂಲಕ ಬಗೆಹರಿಸಿಕೊಳ್ಳಲು ಹೈಕೋರ್ಟ್ ಕೇರಳ ಮತ್ತು ಕರ್ನಾಟಕ ಸರ್ಕಾರಗಳಿಗೆ ಸೂಚನೆ ನೀಡಿದೆ. ಪ್ರಯಾ‘ಣಿಕರ ಹಿತದೃಷ್ಟಿಯಿಂದ ಎರಡೂ ರಾಜ್ಯಗಳ ಸರ್ಕಾರಿ ಬಸ್ ಸಂಚಾರಕ್ಕೆ ಅನುವು ಮಾಡಿಕೊಡಬೇಕು ಎಂದು ಅರಣ್ಯ ಇಲಾಖೆಗೆ ಪ್ರಸ್ತಾವ ಸಲ್ಲಿಸಲು ಸಭೆಯಲ್ಲಿ ನಿರ್ಣಯಿಸಲಾಗಿದೆ ಎಂದೂ ತಿಳಿಸಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry