ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

2,200 ಅಭ್ಯರ್ಥಿಗಳಿಗೆ ಉದ್ಯೋಗ

Last Updated 9 ಮಾರ್ಚ್ 2018, 19:50 IST
ಅಕ್ಷರ ಗಾತ್ರ

ಬೆಂಗಳೂರು: ಆರ್.ವಿ.ದೇವರಾಜ್ ಸೇವಾ ಪ್ರತಿಷ್ಠಾನವು ಕರ್ನಾಟಕ ಕೌಶಲ ಅಭಿವೃದ್ಧಿ ನಿಗಮ ಹಾಗೂ ಎಸ್‌ಎಸ್‌ಬಿ ಸಲ್ಯೂಷನ್ಸ್‌ ಸಹಯೋಗದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಉದ್ಯೋಗ ಹಾಗೂ ಕೌಶಲ ಮೇಳದಲ್ಲಿ ಸುಮಾರು 2,200 ಅಭ್ಯರ್ಥಿಗಳಿಗೆ ಉದ್ಯೋಗ ದೊರೆತಿದೆ.

ಮೇಳದಲ್ಲಿ ಇನ್ಫೊಸಿಸ್‌, ಅಕ್ಸೆಂಚರ್, ಗ್ರೋ ಇನ್ಸೇಷಿಯಾ, ಕೆನರಾ ಬ್ಯಾಂಕ್‌, ಎಚ್‍ಡಿಎಫ್‍ಸಿ ಬ್ಯಾಂಕ್‌ ಹಾಗೂ ಸಮನ್ವಿತಾ ಸೇರಿದಂತೆ 112 ಕಂಪನಿಗಳು ಭಾಗವಹಿಸಿದ್ದವು. 4,000 ಸಾವಿರಕ್ಕೂ ಹೆಚ್ಚು ಅಭ್ಯರ್ಥಿಗಳು ಸಂದರ್ಶನದಲ್ಲಿ ಭಾಗವಹಿಸಿದ್ದರು. ಸುಮಾರು 500 ಅಭ್ಯರ್ಥಿಗಳು ಎರಡನೇ ಸುತ್ತಿಗೆ ಆಯ್ಕೆಯಾಗಿದ್ದಾರೆ. 35 ಅಭ್ಯರ್ಥಿಗಳಿಗೆ ಸ್ವಯಂ ಉದ್ಯೋಗಕ್ಕೆ ಮಾರ್ಗದರ್ಶನ ದೊರೆತಿದೆ.

ಈ ಮೇಳದಲ್ಲಿ ಆಯ್ಕೆಯಾದ ಅಭ್ಯರ್ಥಿಗಳ ಒಂದು ವರ್ಷದ ಭವಿಷ್ಯ ನಿಧಿ ಮತ್ತು ಇಎಸ್‍ಐ ಮೊತ್ತವನ್ನು ರಾಜ್ಯ ಸರ್ಕಾರವೇ ಭರಿಸಲಿದೆ. ಈ ಅಭ್ಯರ್ಥಿಗಳ ಉದ್ಯೋಗ ಕಾಯಂಗೊಂಡರೆ ಈ ಅವಧಿಯನ್ನು ಎರಡು ವರ್ಷಗಳಿಗೆ ವಿಸ್ತರಿಸಲಾಗುತ್ತದೆ ಎಂದು ಕರ್ನಾಟಕ ಕೌಶಲ ಅಭಿವೃದ್ಧಿ ನಿಗಮದ ಅಧ್ಯಕ್ಷ ಮುರಳೀಧರ ಹಾಲಪ್ಪ ತಿಳಿಸಿದರು.

ಶಾಸಕ ಆರ್‌.ವಿ.ದೇವರಾಜ್, ‘ನಗರದ ಯುವಕ– ಯುವತಿಯರು ತಮ್ಮ ಕೌಶಲಕ್ಕೆ ತಕ್ಕಂತಹ ಉದ್ಯೋಗಗಳನ್ನು ಪಡೆಯಲು ಅವಕಾಶ ಕಲ್ಪಿಸುವುದು ಮೇಳದ ಉದ್ದೇಶ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT