₹ 60 ಲಕ್ಷ ವೆಚ್ಚದ ಕಾಮಗಾರಿಗೆ ಚಾಲನೆ

7
ಗ್ರಾಮೀಣ ಭಾಗದ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಶಾಸಕ ಟಿ.ರಘುಮೂರ್ತಿ

₹ 60 ಲಕ್ಷ ವೆಚ್ಚದ ಕಾಮಗಾರಿಗೆ ಚಾಲನೆ

Published:
Updated:
₹ 60 ಲಕ್ಷ ವೆಚ್ಚದ ಕಾಮಗಾರಿಗೆ ಚಾಲನೆ

ಚಳ್ಳಕೆರೆ: ಗ್ರಾಮೀಣ ಭಾಗಗಳ ಅಭಿವೃದ್ಧಿಯಿಂದ ಮಾತ್ರ ಸಮಾಜದ ಏಳಿಗೆ ಸಾಧ್ಯ. ಹೀಗಾಗಿ ಸರ್ಕಾರದ ಅನುದಾನವನ್ನು ಸಮರ್ಪಕವಾಗಿ ಬಳಿಸಿ, ಹಳ್ಳಿಗಳಲ್ಲಿ ಅಭಿವೃದ್ಧಿ ಕಾರ್ಯ ಕೈಗೊಳ್ಳಲಾಗುತ್ತಿದೆ ಎಂದು ಶಾಸಕ ಟಿ.ರಘುಮೂರ್ತಿ ತಿಳಿಸಿದರು.

ತಾಲ್ಲೂಕಿನ ಮೀರಾಸಾಬಿಹಳ್ಳಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಶುಕ್ರವಾರ ₹ 60 ಲಕ್ಷ ವೆಚ್ಚದ ಹಲವು ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡಿ ಅವರು ಮಾತನಾಡಿದರು.

ಮೀರಾಸಾಬಿಹಳ್ಳಿಯಲ್ಲಿ ₹ 5 ಲಕ್ಷ ವೆಚ್ಚದಲ್ಲಿ ಕೆಂಚಾವಧೂತ ಸಮುದಾಯ ಭವನ, ಸಮೀಪದ ವಿಡಪನಕುಂಟೆ ಗ್ರಾಮದಲ್ಲಿ ₹ 5 ಲಕ್ಷ ವೆಚ್ಚದಲ್ಲಿ ಸಾಂಸ್ಕೃತಿಕ ಭವನ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಲಾಗಿದೆ ಎಂದರು.

ಬೇಸಿಗೆ ಕಾಲ ಆರಂಭವಾಗುತ್ತಿದ್ದು, ಕುಡಿಯುವ ನೀರಿನ ಸಮಸ್ಯೆ ಪರಿಹರಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗುತ್ತದೆ. ಮುಖ್ಯವಾಗಿ ಜಾನುವಾರಿಗೆ ನೀರನ್ನು ಒದಗಿಸಲು ತೊಟ್ಟಿಗಳ ನಿರ್ಮಾಣ ಮಾಡಲಾಗುತ್ತದೆ ಎಂದು ಹೇಳಿದರು.

ಸಿಸಿ ರಸ್ತೆ, ಚರಂಡಿ, ಸಮುದಾಯ ಭವನ ನಿರ್ಮಾಣ ಮತ್ತು ರಸ್ತೆ ಡಾಂಬರೀಕರಣ ಒಳಗೊಂಡಂತೆ ಹಲವು ಮೂಲಸೌಕರ್ಯ ಒದಗಿಸುವಲ್ಲಿ ಅಧಿಕಾರಿಗಳ ಪಾತ್ರ ಅತ್ಯಂತ ಮುಖ್ಯ. ಕಾಮಗಾರಿ ವೇಳೆ ಅಭಿವೃದ್ಧಿ ಕಾರ್ಯಗಳ ಗುಣಮಟ್ಟ ಕಾಪಾಡುವ ನಿಟ್ಟಿನಲ್ಲಿ ಅಧಿಕಾರಿಗಳು ಎಚ್ಚರ ವಹಿಸಬೇಕು ಎಂದು ತಿಳಿಸಿದರು.

ಎಪಿಎಂಸಿ ಅಧ್ಯಕ್ಷ ರೆಡ್ಡಿಹಳ್ಳಿ ಶಿವಣ್ಣ, ತಾಲ್ಲೂಕು ಪಂಚಾಯ್ತಿ ಅಧ್ಯಕ್ಷ ಜಿ.ವೀರೇಶ್, ಜಿಲ್ಲಾ ಪಂಚಾಯ್ತಿ ಮಾಜಿ ಅಧ್ಯಕ್ಷ ರವಿಕುಮಾರ್, ಜಾನಪದ ತಜ್ಞ ಮೀರಾಸಾಬಿಹಳ್ಳಿ ಶಿವಣ್ಣ, ನಿವೃತ್ತ ಪ್ರಾಂಶುಪಾಲ ಸಿ.ಶಿವಲಿಂಗಪ್ಪ, ತಾಲ್ಲೂಕು ಪಂಚಾಯ್ತಿ ಮಾಜಿ ಅಧ್ಯಕ್ಷ ರಂಗಸ್ವಾಮಿ, ಮುಖಂಡರಾದ ಕರಿಕೆರೆ ರಾಜಣ್ಣ, ಪಿಡಿಒ ಮಹಾಂತೇಶ್ ಅವರೂ ಇದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry