13ರಂದು ದಾವಣಗೆರೆಗೆ ಸಿ.ಎಂ ಸಿದ್ದರಾಮಯ್ಯ ಭೇಟಿ

7

13ರಂದು ದಾವಣಗೆರೆಗೆ ಸಿ.ಎಂ ಸಿದ್ದರಾಮಯ್ಯ ಭೇಟಿ

Published:
Updated:

ದಾವಣಗೆರೆ: ಮಾರ್ಚ್‌ 13ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ದಾವಣಗೆರೆಗೆ ಭೇಟಿ ನೀಡಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

13ರಂದು ಮಧ್ಯಾಹ್ನ 1.50ಕ್ಕೆ ಹಾವೇರಿ ಜಿಲ್ಲೆಯ ರಾಣೆಬೆನ್ನೂರಿನ ಹುಲಿಹಳ್ಳಿ ಕ್ರಾಸ್ ಹೆಲಿಪ್ಯಾಡ್‌ಗೆ ಬಂದು, ಹೆಲಿಕಾಪ್ಟರ್ ಮೂಲಕ ಮಧ್ಯಾಹ್ನ ನಗರದ ಎಂಬಿಎ ಕಾಲೇಜು ಮೈದಾನದಲ್ಲಿರುವ ಹೆಲಿಪ್ಯಾಡ್‌ನಲ್ಲಿ ಬಂದಿಳಿಯುವರು.

ಮಧ್ಯಾಹ್ನ 2.30ಕ್ಕೆ ನಗರದ ಸರ್ಕಾರಿ ಹೈಸ್ಕೂಲ್‌ ಮೈದಾನದಲ್ಲಿ ದಾವಣಗೆರೆ ಉತ್ತರ ಮತ್ತು ದಕ್ಷಿಣ ವಿಧಾನಸಭಾ ಕ್ಷೇತ್ರಗಳ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ, ಶಿಲಾನ್ಯಾಸ ಹಾಗೂ ಸಾರ್ವಜನಿಕ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ.

ಸಂಜೆ 4.30ಕ್ಕೆ ಹೆಲಿಕಾಪ್ಟರ್ ಮೂಲಕ ಬೆಂಗಳೂರಿಗೆ ವಾಪಸಾಗಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry