ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜ್ಯದಲ್ಲಿ ಹಾಲು ಉತ್ಪಾದನೆ ಹೆಚ್ಚಳ

ತೆಲಗಿ: ಬಗರ್‌ಹುಕುಂ ಸಾಗುವಳಿ ಪತ್ರ ವಿತರಿಸಿದ ಶಾಸಕ ರವೀಂದ್ರ
Last Updated 10 ಮಾರ್ಚ್ 2018, 6:48 IST
ಅಕ್ಷರ ಗಾತ್ರ

ಹರಪನಹಳ್ಳಿ: ಪ್ರತಿ ಲೀಟರ್ ಹಾಲಿಗೆ ರಾಜ್ಯ ಸರ್ಕಾರ ₹ 5 ಪ್ರೋತ್ಸಾಹಧನ ನೀಡುತ್ತಿರುವುದರಿಂದ ರಾಜ್ಯದಲ್ಲಿ ಹಾಲಿನ ಉತ್ಪಾದನೆ ಭಾರಿ ಪ್ರಮಾಣದಲ್ಲಿ ಹೆಚ್ಚಳವಾಗಿದೆ ಎಂದು ಶಾಸಕ ಎಂ.ಪಿ.ರವೀಂದ್ರ ಹೇಳಿದರು.

ತಾಲ್ಲೂಕಿನ ತೆಲಗಿಯಲ್ಲಿ ಶುಕ್ರವಾರ ನಡೆದ ಬಗರ್‌ಹುಕುಂ ಸಾಗುವಳಿದಾರರಿಗೆ ಹಕ್ಕುಪತ್ರ ವಿತರಣೆ ಹಾಗೂ ಫಲಾನುಭವಿಗಳಿಗೆ ಸರ್ಕಾರದ ವಿವಿಧ ಸೌಲಭ್ಯಗಳ ವಿತರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ರಾಜ್ಯ ಸರ್ಕಾರ ಕ್ಷೀರಭಾಗ್ಯ ಯೋಜನೆ ಜಾರಿಗೆ ತಂದಿರುವುದರಿಂದ ರಾಜ್ಯದಲ್ಲಿ ಹಾಲಿನ ಉತ್ಪಾದನೆ ಗಣನೀಯ ಪ್ರಮಾಣದಲ್ಲಿ ಏರಿಕೆ ಕಂಡಿದೆ. ಮೂರ್ನಾಲ್ಕು ವರ್ಷಗಳ ಹಿಂದೆ ಹಾಲಿನ ಉತ್ಪಾದನೆ ಪ್ರಮಾಣ 45 ಲಕ್ಷ ಲೀಟರ್ ಇತ್ತು. ಇದೀಗ 71 ಲಕ್ಷ ಲೀಟರ್‌ಗೆ ಹೆಚ್ಚಳವಾಗಿದೆ. ಈ ಕ್ಷೇತ್ರದಲ್ಲಿ ಕರ್ನಾಟಕ ಭಾರತದಲ್ಲೇ ಎರಡನೇ ಸ್ಥಾನದಲ್ಲಿದೆ ಎಂದು ಹೇಳಿದರು.

ತೆಲಗಿ ಹೋಬಳಿಯ ಅಭಿವೃದ್ಧಿಗೆ ₹ 101.56 ಕೋಟಿ ಅನುದಾನ ನೀಡಲಾಗಿದೆ. ಹೋಬಳಿ ವ್ಯಾಪ್ತಿಯ ಎಲ್ಲ ಗ್ರಾಮ ಪಂಚಾಯ್ತಿಗಳಿಗೂ ಅಭಿವೃದ್ಧಿ ಕಾಮಗಾರಿ ಕೈಗೊಳ್ಳಲು ಸಾಕಷ್ಟು ಅನುದಾನ ನೀಡಲಾಗಿದೆ ಎಂದು ಅವರು ತಿಳಿಸಿದರು.

ಉಪ ವಿಭಾಗಾಧಿಕಾರಿ ಜಿ.ನಜ್ಮಾ ಮಾತನಾಡಿ, ಗ್ರಾಮ ಮಟ್ಟದಲ್ಲಿ ಕಾರ್ಯಕ್ರಮ ಆಯೋಜಿಸಿ ಸರ್ಕಾರದ ಸೌಲಭ್ಯಗಳನ್ನು ಜನರ ಮನೆ ಬಾಗಿಲಿಗೆ ಮುಟ್ಟಿಸುವ ಉದ್ದೇಶದಿಂದ ಜನಸ್ಪಂದನ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ ಎಂದು ಹೇಳಿದರು.

ಜಿಲ್ಲಾ ಪಂಚಾಯ್ತಿ ಸದಸ್ಯ ಎಚ್.ಪರಶುರಾಮಪ್ಪ, ತಹಶೀಲ್ದಾರ್‌ ಕೆ.ಗುರುಬಸವರಾಜ, ಜಿಲ್ಲಾ ಪಂಚಾಯ್ತಿ ಮಾಜಿ ಅಧ್ಯಕ್ಷ ಕಲ್ಲಹಳ್ಳಿ ಚಿದಾನಂದಪ್ಪ, ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿ ಎಂ.ವಿ.ಅಂಜಿನಪ್ಪ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬೇಲೂರು ಅಂಜಪ್ಪ, ಮುಖಂಡರಾದ ಆಲದಹಳ್ಳಿ ಷಣ್ಮುಖಪ್ಪ, ಪ್ರಕಾಶ ಪಾಟೀಲ್, ಡಿ.ಅಬ್ದುಲ್ ರಹಿಮಾನ್, ಹುಲಿಕಟ್ಟಿ ಚಂದ್ರಪ್ಪ, ಅಲಗಿಲವಾಡ ಸಿದ್ದಲಿಂಗಣ್ಣ, ಲಾಟಿ ದಾದಾಪೀರ್, ಮಂಜುಳಾ ಜಗದೀಶ, ಹಲಗೇರಿ ಮಂಜಪ್ಪ, ಪೂಜಾರ ಬಸಣ್ಣ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT