ಪರಿಸರ ಸಂರಕ್ಷಣೆಗೆ ಮುಂದಾಗಲು ಸಲಹೆ

7
ಪರಿಸರ ಮಿತ್ರ ಶಾಲಾ ಪ್ರಶಸ್ತಿ ಪ್ರದಾನ ಸಮಾರಂಭ

ಪರಿಸರ ಸಂರಕ್ಷಣೆಗೆ ಮುಂದಾಗಲು ಸಲಹೆ

Published:
Updated:
ಪರಿಸರ ಸಂರಕ್ಷಣೆಗೆ ಮುಂದಾಗಲು ಸಲಹೆ

ಕಲಬುರ್ಗಿ: ‘30 ವರ್ಷಗಳಲ್ಲಿ ಅರಣ್ಯ ನಾಶದ ಹೆಚ್ಚಾಗಿದೆ. ಇದರಿಂದ ಪರಿಸರ ಸಂಪನ್ಮೂಲವನ್ನು ಕಳೆದು ಕೊಳ್ಳುತ್ತಿದ್ದೇವೆ. ಪರಿಸರ ಸಂರಕ್ಷಣೆಗೆ ನಾವೆಲ್ಲರೂ ಮುಂದಾಗಬೇಕು’ ಎಂದು ನ್ಯಾಯಾಧೀಶ ಎಸ್‌.ಆರ್‌.ಮಾಣಿಕ್ಯ ಹೇಳಿದರು.

ಇಲ್ಲಿನ ರೋಟರಿ ಕ್ಲಬ್ ಸಭಾಂಗಣದಲ್ಲಿ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಸಾರ್ವಜನಿಕ ಶಿಕ್ಷಣ ಇಲಾಖೆ ಮತ್ತು ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್‌ ಆಶ್ರಯದಲ್ಲಿ ಶುಕ್ರವಾರ ಏರ್ಪಡಿಸಿದ್ದ ಪರಿಸರ ಮಿತ್ರ ಶಾಲಾ ಪ್ರಶಸ್ತಿ ಪ್ರದಾನ ಸಮಾರಂಭ ಉದ್ಘಾಟಿಸಿ ಮಾತನಾಡಿದರು.

ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್‌ ಗೌರವ ಕಾರ್ಯದರ್ಶಿ ಗಿರೀಶ ಕಡ್ಲೆವಾಡಿ ಮಾತನಾಡಿ, ‘ಮಣ್ಣು, ನೀರು, ಗಾಳಿ ಕುರಿತು ಶಾಲಾ–ಕಾಲೇಜುಗಳಲ್ಲಿ ಜಾಗೃತಿ ಮೂಡಿಸಬೇಕು’ ಎಂದರು.

ಪರಿಸರ ಮಿತ್ರ ಶಾಲಾ ಪ್ರಶಸ್ತಿ ಪ್ರದಾನ ಮಾಡಲಾಯಿತು. ಪರಿಸರ ಅಧಿಕಾರಿ ದಿವಾಕರ ಡಿ. ಅಧ್ಯಕ್ಷತೆ ವಹಿಸಿದ್ದರು. ವೆಂಟೇಶ ಶೇಖರ ಇದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry