ಕಾಡಾನೆ ದಾಳಿಗೆ ಕಾರ್ಮಿಕ ಬಲಿ

7

ಕಾಡಾನೆ ದಾಳಿಗೆ ಕಾರ್ಮಿಕ ಬಲಿ

Published:
Updated:

ಸಿದ್ದಾಪುರ: ಕೊಡಗು ಜಿಲ್ಲೆಯಲ್ಲಿ ಕಾಡಾನೆಗಳ ಹಾವಳಿ ಮಿತಿಮೀರಿದ್ದು ಚೆನ್ನಯ್ಯನಕೋಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಾಡಗ ಬಾಣಂಗಾಲ ಗ್ರಾಮದಲ್ಲಿ ಶುಕ್ರವಾರ ಕಾರ್ಮಿಕ ಬಲಿಯಾಗಿದ್ದಾರೆ.

ಹಾಸನ ಜಿಲ್ಲೆಯ ಅರಕಲಗೂಡಿನ ರುದ್ರಪ್ಪ (55) ಮೃತ ವ್ಯಕ್ತಿ. ಗ್ರಾಮದ ಸಿ.ಟಿ.ಪೊನ್ನಪ್ಪ ಅವರ ಕಾಫಿ ತೋಟದಲ್ಲಿ ಕಾರ್ಮಿಕರಾಗಿದ್ದ ಇವರು, ಕೆಲಸ ಮುಗಿಸಿ ಸಂಜೆ ಮನೆಗೆ ತೆರಳುತ್ತಿದ್ದಾಗ ಏಕಾಏಕಿ ಕಾಡಾನೆ ದಾಳಿ ಮಾಡಿದೆ.

‘ತೋಟದಲ್ಲಿ ಕಾಡಾನೆಯ ಘೀಳಿಡುವ ಶಬ್ದ ಕೇಳಿ ಕಾರ್ಮಿಕರೊಂದಿಗೆ ಬಂದು ನೋಡಿದಾಗ ರುದ್ರಪ್ಪನನ್ನು ಆನೆ ಕೊಂದು ಹಾಕಿತ್ತು’ ಎಂದು ತೋಟದ ಮಾಲೀಕ ಸಿ.ಟಿ.ಪೊನ್ನಪ್ಪ ತಿಳಿಸಿದರು.

ಸ್ಥಳಕ್ಕೆ ಅರಣ್ಯಾಧಿಕಾರಿ ಶ್ರೀನಿವಾಸ್ ಹಾಗೂ ಸಿಬ್ಬಂದಿ, ಸಿದ್ದಾಪುರ ಪೊಲೀಸ್ ಠಾಣೆಯ ಹೆಡ್‌ಕಾನ್‌ಸ್ಟೆಬಲ್‌ ಜಿ.ಕೆ. ಸುಬ್ರಹ್ಮಣ್ಯ ಹಾಗೂ ಸಿಬ್ಬಂದಿ ಭೇಟಿ ಮಾಡಿ ಪರಿಶೀಲಿಸಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry