ನಾಳೆ ಎರಡನೇ ಸುತ್ತಿನ ಪಲ್ಸ್ ಪೋಲಿಯೊ

7

ನಾಳೆ ಎರಡನೇ ಸುತ್ತಿನ ಪಲ್ಸ್ ಪೋಲಿಯೊ

Published:
Updated:

ಮಂಗಳೂರು: ಇದೇ 11 ರಂದು ಎರಡನೇ ಸುತ್ತಿನಲ್ಲಿ ಜಿಲ್ಲೆಯಾದ್ಯಂತ ಪಲ್ಸ್ ಪೋಲಿಯೊ ಕಾರ್ಯಕ್ರಮ ನಡೆಯಲಿದೆ. ಬೆಳಿಗ್ಗೆ 8 ರಿಂದ 5 ಗಂಟೆವರೆಗೂ ಎರಡನೇ ಸುತ್ತಿನ ಪಲ್ಸ್ ಪೋಲಿಯೊ ಕಾರ್ಯಕ್ರಮ ನಡೆಯಲಿದ್ದು, 5 ವರ್ಷದೊಳಗಿನ ಎಲ್ಲಾ ಮಕ್ಕಳಿಗೆ 2 ಹನಿ ಪೋಲಿಯೊ ಹನಿ ಹಾಕಿಸಿ ಜೀವನ ಪೂರ್ತಿ ಪೋಲಿಯೊ ವಿರುದ್ಧ ವಿಜಯ ಸಾಧಿಸಲು ನೆರವಾಗುವಂತೆ ಪ್ರಕಟಣೆ ತಿಳಿಸಿದೆ.

ಭಾರತ ಪೋಲಿಯೊ ಮುಕ್ತ ದೇಶವಾದರೂ, ಪಾಕಿಸ್ತಾನ, ಅಫ್ಘಾನಿಸ್ತಾನ ಮತ್ತು ನೈಜೀರಿಯಾ ಈ ಮೂರು ದೇಶಗಳಲ್ಲಿ ಮಾತ್ರ ಪೋಲಿಯೊ ಪ್ರಕರಣಗಳು ಇನ್ನೂ ಪತ್ತೆಯಾಗುತ್ತಿದ್ದು, ಜನರು ಆ ದೇಶಗಳಿಗೆ ಹಾಗೂ ಆ ದೇಶಗಳಿಂದ ಭಾರತಕ್ಕೆ ಪ್ರಯಾಣ ಬೆಳೆಸುತ್ತಿರುವುದರಿಂದ ಪೋಲಿಯೊ ರೋಗ ಹರಡುವ ಸಾಧ್ಯತೆಗಳು ಇರುವುದರಿಂದ ಮತ್ತೆ ಮತ್ತೆ ಪೋಲಿಯೊ ಹನಿಗಳನ್ನು ತಪ್ಪದೇ ಮಕ್ಕಳಿಗೆ ಹಾಕಿಸಬೇಕು ಎಂದು ಪ್ರಕಟಣೆ ತಿಳಿಸಿದೆ.

ದ್ವಿತೀಯ ಪಿ.ಯು.ಸಿ ಪರೀಕ್ಷಾ ಹಾಜರಾತಿ

ಮಂಗಳೂರು: ಶುಕ್ರವಾರ ನಡೆದ ದ್ವಿತೀಯ ಪಿಯುಸಿ ಗೃಹ ವಿಜ್ಞಾನ ಪರೀಕ್ಷೆಗೆ ಹಾಜರಾದ ವಿದ್ಯಾರ್ಥಿಗಳು -63, ಯಾರು ಗೈರು ಹಾಜರಾಗಿಲ್ಲ. ಜಿಲ್ಲೆಯಲ್ಲಿ ಯಾವುದೇ ವಿದ್ಯಾರ್ಥಿಗಳು ಡಿಬಾರ್ ಆಗಿರುವುದಿಲ್ಲ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ಪ್ರಕಟಣೆ ತಿಳಿಸಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry